ಇಂದು ಮತ್ತು ನಾಳೆ ಅಲ್ಲಲ್ಲಿ ತುಂತುರು ಮಳೆ ಸಂಭವ

ಈ ಸುದ್ದಿಯನ್ನು ಶೇರ್ ಮಾಡಿ

Bangalore-Weather-Rain-01

ಬೆಂಗಳೂರು,ಡಿ.13- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಇಂದು ಮತ್ತು ನಾಳೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು ಮಹಾರಾಷ್ಟ್ರದಿಂದ ತಮಿಳುನಾಡಿನವರೆಗಿನ ಭೂವಲಯದಲ್ಲಿ ವಾಯುಭಾರ ಕುಸಿತದ ಮಾದರಿಯಲ್ಲಿ ವಾತಾವರಣದಲ್ಲಿ ಬದಲಾವಣೆಯಾಗಿದೆ. ಇದರಿಂದ ಗಾಳಿಯ ಪ್ರಮಾಣ ಹೆಚ್ಚಾಗಿ ಕಂಡುಬರುವುದಿಲ್ಲ. ಮೋಡ ಕವಿದ ವಾತಾವರಣ ಇರಲಿದೆ ಎಂದರು. ನಿನ್ನೆಯಿಂದಲೇ ಮೋಡಕವಿದ ವಾತಾವರಣ ರಾಜ್ಯದಲ್ಲಿ ಕಂಡುಬಂದಿದ್ದು, ಚಾಮರಾಜನಗರ, ರಾಮನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಒಂದು ಕಡೆ 67 ಮಿಲಿಮೀಟರ್‍ನಷ್ಟು ಮಳೆಯಾದ ವರದಿಯಾಗಿದೆ. ನಾಳೆಯವರೆಗೂ ಇದೇ ರೀತಿ ಮೋಡ ಕವಿದಿದ್ದು, ಭಾರೀ ಮಳೆಯಾಗುವ ನಿರೀಕ್ಷೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin