ಇಂದು ಸಂಜೆ ಎಸ್. ಎಂ ಕೃಷ್ಣ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

Krishna-Join-BJP

ಬೆಂಗಳೂರು, ಮಾ.22- ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯದ ಹಿರಿಯ ಮುತ್ಸದ್ದಿ ಎಸ್. ಎಂ ಕೃಷ್ಣ ಅವರು ಇಂದು ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ಒಕ್ಕಲಿಗ ಸಮೂದಾಯದ ಪ್ರಭಾವಿ ನಾಯಕ ಮತ್ತೇ ಪಾಂಚಜನ್ಯ ಮೊಳಗಿಸಲು ಸಜ್ಜಾ ಗಿದ್ದಾರೆ.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ. ಸದಾನಂದಾಗೌಡ, ರಮೇಶ್ ಜಿಗಜಿಣಗಿ, ಸೇರಿದಂತೆ ರಾಜ್ಯದ ಪ್ರಮುಖ ನಾಯಕರ ಸಮ್ಮುಖದಲ್ಲಿ ಕಮಲವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳುತ್ತಿಲ್ಲ. ಈಗಾಗಲೇ ಅವರು ಕೃಷ್ಣಗೆ ದೂರವಾಣಿ ಮೂಲಕ ಶುಭ ಕೋರಿದ್ದಾರೆ.  ಸುಮಾರು ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಸಂಬಂಧಕ್ಕೆ ವಿದಾಯ ಹೇಳಿ, ತಮ್ಮ ಎರಡನೇ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ.ಮಾಜಿ ಡಿಸಿಎಂ ಅಶೋಕ್ ಅವರು ಬೆಳಗ್ಗೆ ಬೆಂಗಳೂರಿನಿಂದ ನವದೆಹಲಿಗೆ ತೆರಳಿದರು. ಬಳಿಕ ಅಕ್ಬರ್ ರಸ್ತೆಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ವಿದ್ಯುಕ್ತವಾಗಿ ಸೇರ್ಪಡೆಯಾದರು.

ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿರುವುದರಿಂದ ಎಸ್.ಎಂ. ಕೃಷ್ಣ ಅವರನ್ನು ಆದಷ್ಟು ಬೇಗ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡರೆ ಉಪಚುನಾವಣೆಯಲ್ಲೂ ಲಾಭವಾಗುತ್ತದೆ ಎಂಬ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಅವರ ಪಕ್ಷ ಸೇರ್ಪಡೆಗೆ ನಾಳೆ ಸಂಜೆಯೇ ಮುಹೂರ್ತ ನಿಗದಿಯಾಗಿದೆ.  ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಂಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಕೃಷ್ಣರವರ ಪಕ್ಷ ಸೇರ್ಪಡೆ ಆದಷ್ಟು ಶೀಘ್ರವಾದರೆ ಒಳ್ಳೆಯದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಇಂದು ಬೆಳಗ್ಗೆ ದೂರವಾಣಿಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ನಾಳೆಯೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ತೀರ್ಮಾನಕ್ಕೆ ಅಮಿತ್ ಷಾ ಸಮ್ಮತಿಸಿದರು ಎನ್ನಲಾಗಿದೆ.

ಉಪಚುನಾವಣೆಯಲ್ಲಿ ಯಡಿಯೂರಪ್ಪನವರು ಬ್ಯುಸಿಯಾಗಿರುವುದರಿಂದ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ. ಕೃಷ್ಣರನ್ನು ದೆಹಲಿಗೆ ಕರೆದೊಯ್ದು ಪಕ್ಷ ಸೇರ್ಪಡೆ ಮಾಡಿಸುವ ಜವಾಬ್ದಾರಿಯನ್ನು ಮಾಜಿ ಡಿಸಿಎಂ ಆರ್. ಅಶೋಕ್ ಅವರಿಗೆ ವಹಿಸಲಾಗಿದೆ. ನಾಳೆ ಸಂಜೆ ಕೃಷ್ಣರಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ಅಮಿತ್ ಷಾ ಅವರು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.  ಕೇಂದ್ರ ಸಚಿವರಾದ ಅನಂತಕುಮಾರ್ ಹಾಗೂ ಸದಾನಂದಗೌಡ ಮತ್ತಿತರ ಗಣ್ಯರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಯಡಿಯೂರಪ್ಪನವರು ಅನಂತಕುಮಾರ್ ಹಾಗೂ ಸದಾನಂದಗೌಡರ ಜತೆಯೂ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಪಕ್ಷ ಸೇರ್ಪಡೆ ಮಾ. 15 ರಂದು ನಿಗದಿಯಾಗಿತ್ತಾದರೂ ಅವರ ಸಹೋದರಿಯ ನಿಧನದಿಂದ ಅವರ ಪಕ್ಷ ಸೇರ್ಪಡೆ ಮುಂದಕ್ಕೆ ಹೋಗಿತ್ತು. ಏಪ್ರಿಲ್ ಮೊದಲ ವಾರದಲ್ಲಿ ಎಸ್.ಎಂ. ಕೃಷ್ಣ ಅವರು ಪಕ್ಷ ಸೇರ್ಪಡೆಗೆ ನಿರ್ಧರಿಸಲಾಗಿತ್ತಾದರೂ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿದೆ ಎಂದು ಗೊತ್ತಾಗಿದೆ.

ದೆಹಲಿಯಲ್ಲಿ ಪಕ್ಷ ಸೇರ್ಪಡೆಯಾದ ನಂತರ ಮರುದಿನ ಅಂದರೆ ಗುರುವಾರ ಕೃಷ್ಣ ಅವರು ಬೆಂಗಳೂರಿಗೆ ವಾಪಸಾಗಲಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಜೆಪಿ ಪಕ್ಷದ ಕಚೇರಿವರೆಗೂ ಮೆರವಣಿಗೆ ಮೂಲಕ ಅವರನ್ನು ಕರೆತರಲಿದ್ದಾರೆ. ಪಕ್ಷದ ಕಚೇರಿಯಲ್ಲಿ ರಾಜ್ಯಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೃಷ್ಣರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin