ಇದೆ ಮೊದಲ ಬಾರಿಗೆ ಕೋಲ್ಕತ್ತಾದಲ್ಲಿ ಕನ್ನಡ ಚಲನಚಿತ್ರೋತ್ಸವ

ಈ ಸುದ್ದಿಯನ್ನು ಶೇರ್ ಮಾಡಿ

Film--01

ಬೆಂಗಳೂರು,ಜು.20-ಕರ್ನಾಟಕ ಚಲನಚಿತ್ರ ಅಕಾಡೆಮಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಭಾರತೀಯ ಚಲನಚಿತ್ರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಜುಲೈ 21ರಿಂದ 24ರವರೆಗೆ ಮೂರು ದಿನಗಳ ಕನ್ನಡ ಚಲನಚಿತ್ರೋತ್ಸವವನ್ನು ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಎಚ್.ಬಿ.ದಿನೇಶ್ ತಿಳಿಸಿದ್ದಾರೆ.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾದ ಎನ್.ಆರ್.ವಿಶುಕುಮಾರ್, ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಸಂಗೀತ ನಿರ್ದೇಶಕ ಹಂಸಲೇಖ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ಚಲನಚಿತ್ರೋತ್ಸವದಲ್ಲಿ ಭಾಗವಹಿಸುವರು.

ಅನನ್ಯ ಕಾಸವರಳ್ಳಿ ನಿರ್ದೇಶನದ ಹರಿಕಥಾ ಪ್ರಸಂಗ, ಬಿ.ಎಂ.ಗಿರಿರಾಜ್ ನಿರ್ದೇಶನದ ಅಮರಾವತಿ, ಪವನ್‍ಕುಮಾರ್ ನಿರ್ದೇಶನದ ಯೂಟರ್ನ್, ಪೃಥ್ವಿ ಕೋಣನೂರು ನಿರ್ದೇಶನದ ರೈಲ್ವೆ ಚಿಲ್ಡ್ರನ್ , ರಿಶಿಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ, ಡಿ.ಸತ್ಯಪ್ರಕಾಶ್ ನಿರ್ದೇಶಿಸಿರುವ ರಾಮ ರಾಮ ರೇ ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.  ಹಲವಾರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿರುವ ಹಾಗೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಪಡೆದಿರುವ ತಿಥಿ ಚಿತ್ರವನ್ನು ಉದ್ಘಾಟನಾ ಚಿತ್ರವಾಗಿ ಪ್ರದರ್ಶಿಸಲಾಗುವುದು ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin