ಇದೇನು ಗೂಂಡಾ ರಾಜ್ಯನಾ..? ಸರ್ಕಾರದ ವಿರುದ್ಧ ಗುಡುಗಿದ ಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

devegowda-davanagere

ಬೆಂಗಳೂರು, ಮಾ.7-ಲೋಕಾಯುಕ್ತ ಕಚೇರಿ ನುಗ್ಗಿ ನ್ಯಾಯಮೂರ್ತಿ ಅವರ ಮೇಲೆ ಚಾಕುವಿನಿಂದ ಇರಿಯಲಾಗಿದೆ ಎಂದರೆ ನಾವು ಯಾವ ರಾಜ್ಯದಲ್ಲಿದ್ದೇವೆ, ಇದೇನು ಕಥೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ವಿಕಾಸಪರ್ವ ಸಮಾರಂಭದಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಇದನ್ನು ನೋಡಿದರೆ ನಾವೆಲ್ಲಿದ್ದೇವೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಹೇಳಿದರು.

ಲೋಕಾಯುಕ್ತರಿಗೇ ರಕ್ಷಣೆ ಇಲ್ಲದ ಮೇಲೆ ಮತ್ಯಾರಿಗೆ ಇವರು ರಕ್ಷಣೆ ಕೊಡುತ್ತಾರೆ ಇದೇನು ಗೂಂಡಾ ರಾಜ್ಯನಾ… ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು. ಕಾವೇರಿ ಸಮಸ್ಯೆ ಕುರಿತು ಚರ್ಚಿಸಲು ಸದ್ಯದಲ್ಲೇ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡುವುದಾಗಿ ಇದೇ ವೇಳೆ ದೇವೇಗೌಡರು ತಿಳಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಎಲ್ಲಾ ರೀತಿಯ ಸೌಲಭ್ಯ ಸಿಗಲಿದೆ ಎಂದು ಹೇಳಿದರು.

Facebook Comments

Sri Raghav

Admin