ಇದೇ 25ರಂದು ಕಾಂಗ್ರೆಸ್ ಸೇರಲಿದ್ದಾರೆ ಜೆಡಿಎಸ್‍ನ ಬಂಡಾಯ ಶಾಸಕರು..?

ಈ ಸುದ್ದಿಯನ್ನು ಶೇರ್ ಮಾಡಿ

jds

ಬೆಂಗಳೂರು, ಮಾ.14- ಜೆಡಿಎಸ್‍ನ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಕಾಲ ಸನ್ನಿಹಿತವಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸಮ್ಮುಖದಲ್ಲಿ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಇದೇ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಾದ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳುವರು.

ಇದಕ್ಕೂ ಮುನ್ನ ಅಂದರೆ ಮಾ.24ರಂದು ಈ ಏಳು ಮಂದಿ ಶಾಸಕರು ಜೆಡಿಎಸ್‍ಗೆ ರಾಜೀನಾಮೆ ನೀಡಿ ನಂತರ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗುವರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಜೆಡಿಎಸ್ ಶಾಸಕರಾಗಿದ್ದ ಜಮೀರ್ ಅಹಮದ್‍ಖಾನ್, ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದನಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ, ಭೀಮಾನಾಯಕ್ ಮತ್ತು ಎಚ್.ಸಿ.ಬಾಲಕೃಷ್ಣ ಕಳೆದ ರಾಜ್ಯಸಭಾ ಚುನಾವಣೆ ವೇಳೆ ಬಂಡಾಯದಿಂದ ಕಾಂಗ್ರೆಸ್‍ಗೆ ಬೆಂಬಲ ಸೂಚಿಸಿದ್ದರು.

Facebook Comments

Sri Raghav

Admin