ಇದ್ದಕ್ಕಿದ್ದಂತೆ ಹೊತ್ತಿ ಉರಿದ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಓಮ್ನಿ ಕಾರ್

ಈ ಸುದ್ದಿಯನ್ನು ಶೇರ್ ಮಾಡಿ

Car-Fire--022

ಮೈಸೂರು,ನ.8- ಶಾಲೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಾರುತಿ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ನಿನ್ನೆ ಮಧ್ಯಾಹ್ನ ಖಾಸಗಿ ಶಾಲೆಯ ಮಕ್ಕಳನ್ನು ಓಮ್ನಿ ಕಾರಿನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ವಿಜಯ್ ಬ್ಯಾಂಕ್ ಸರ್ಕಲ್ ಬಳಿ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಬೆಂಕಿ ಕಂಡ ಸಾರ್ವಜನಿಕರು ಚಾಲಕನಿಗೆ ತಿಳಿಸಿದ್ದಾರೆ. ತಕ್ಷಣ ವಾಹನ ನಿಲ್ಲಿಸಿದ ಚಾಲಕ ಮಕ್ಕಳನ್ನು ಕೆಳಗಿಳಿಸಿದ್ದಾರೆ. ಸುದ್ದಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ.

Facebook Comments

Sri Raghav

Admin