ಇನ್ನು ಮೇಲೆ ವಿಮಾನ ಪ್ರಯಾಣಿಕರಿಗೆ ವೈ-ಫೈ ಸೌಲಭ್ಯ

ಈ ಸುದ್ದಿಯನ್ನು ಶೇರ್ ಮಾಡಿ

Wifi-plane

ನವದೆಹಲಿ, ಆ.25-ಇನ್ನು ಮುಂದೆ ವಿಮಾನದಲ್ಲಿ ಪ್ರಯಾಣಿಕರಿಗೆ ವೈ-ಫೈ ಸೌಲಭ್ಯ ಸಿಗಲಿದೆ.  ಮುಂದಿನ ಹತ್ತು ದಿನದೊಳಗೆ ದೇಶಿ ಮತ್ತು ಸ್ವದೇಶಿ ವಿಮಾನದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವೈ-ಫೈ ಸೌಲಭ್ಯವನ್ನು ಒದಗಿಸಲು ಕೇಂದ್ರ ಸರ್ಕಾರ ಮುಂದೆ ಬಂದಿದೆ. ನಾಗರಿಕ ವಿಮಾನಯಾನದಲ್ಲಿ ನಾವು ಇನ್ನು ಹತ್ತು ದಿನದೊಳಗೆ ವೈ-ಫೈ ಸೌಲಭ್ಯ ಒದಗಿಸಲು ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಇದಕ್ಕೆ ಒಪ್ಪಿಗೆ ಸಿಕ್ಕಿದೆ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿರಾಜು ತಿಳಿಸಿದ್ದಾರೆ.
ವೈ-ಫೈ ಸೌಲಭ್ಯ ಒದಗಿಸುವ ಸಂಬಂಧ ದೂರ ಸಂಪರ್ಕ ಇಲಾಖೆ ಅಧಿಕಾರಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಪ್ರಯಾಣಿಕರ ಒತ್ತಾಸೆಯಂತೆ ನಾವು ಸೌಲಭ್ಯ ಒದಗಿಸಲು ತೀರ್ಮಾನಿಸಿದ್ದೇವೆ ಎಂದು ದೂರಸಂಪರ್ಕ ಇಲಾಖೆ ಕಾರ್ಯದರ್ಶಿ ಆರ್.ಎನ್.ಚೌಬಿ ಸ್ಪಷ್ಟಪಡಿಸಿದ್ದಾರೆ.

ನಮಗೆ ಅನೇಕ ವಿಮಾನಯಾನ ಸಂಸ್ಥೆಗಳಿಂದ ವೈ-ಫೈ ಸೌಲಭ್ಯ ಒದಗಿಸಬೇಕೆಂದು ಒತ್ತಡಗಳು ಬರುತ್ತಲೇ ಇದ್ದವು. ಪ್ರಯಾಣಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ಷೇತ್ರಕ್ಕೆ ಇನ್ನಷ್ಟು ನಾಗರಿಕರನ್ನು ಸೆಳೆಯುವ ಉದ್ದೇಶದಿಂದ ಈ ಕ್ರಮ ಕೈಗಳ್ಳಲಾಗಿದೆ ಎಂಬುದು ಅಧಿಕಾರಿಗಳ ಸ್ಪಷ್ಟನೆ.

► Follow us on –  Facebook / Twitter  / Google+

Facebook Comments

Sri Raghav

Admin