ಇನ್ನೂ ಸಿಕ್ಕಿಲ್ಲ ಕಡಬಗೆರೆ ಶ್ರೀನಿವಾಸ್ ಶೂಟೌಟ್ ರೂವಾರಿ ಮಾಹಿತಿ

ಈ ಸುದ್ದಿಯನ್ನು ಶೇರ್ ಮಾಡಿ

kadabagere

ಬೆಂಗಳೂರು, ಫೆ.10-ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ನಡೆದ ಶೂಟೌಟ್ ಹಿಂದಿನ ರೂವಾರಿ ಯಾರು ಎನ್ನುವುದು ಈವರೆಗೂ ಗೊತ್ತಾಗಿಲ್ಲ.  ಈಶಾನ್ಯ ವಿಭಾಗದ ಪೊಲೀಸರು ಹಲವಾರು ರೌಡಿಗಳನ್ನು ಬಂಧಿಸಿ, ಇನ್ನೂ ಕೆಲವು ರೌಡಿಗಳನ್ನು ಕರೆತಂದು ವಿಚಾರಣೆ ನಡೆಸಿದರೂ ಈ ತನಕ ಸೂತ್ರಧಾರ ಯಾರು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ರಾಜಕಾರಣಿಯೋ, ರಿಯಲ್ ಎಸ್ಟೇಟ್ ಉದ್ಯಮಿಯೋ, ರೌಡಿಯೋ ಯಾರು ಈ ಶೂಟೌಟ್ ಹಿಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಶೂಟೌಟ್ ಪ್ರಕರಣದಲ್ಲಿ ನಾಲ್ವರು ಶಂಕಿತ ಆರೋಪಿಗಳನ್ನು ಈಶಾನ್ಯ ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಪೊಲೀಸರು ಇಬ್ಬರು ಭೂಗತ ಪಾತಕಿಗಳನ್ನು ಬಂಧಿಸಿ 4 ರಿವಾಲ್ವರ್, 48 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದು, ಅವರ ವಿಚಾರಣೆ ಮಾಡಲು ಒಂದು ಪೊಲೀಸ್ ತಂಡ ಶಿವಮೊಗ್ಗಕ್ಕೆ ತೆರಳಿದೆ. ಈ ಮಧ್ಯೆ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಗುಣಮುಖರಾಗುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin