ಇನ್ವೆಸ್ಟ್ ಕರ್ನಾಟಕ ಕಂಪೆನಿ ಕಾರ್ಯಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

Deshapande

ಬೆಂಗಳೂರು, ಆ.23- ರಾಷ್ಟ್ರದಲ್ಲೇ ಮೊದಲ ಬಾರಿಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಇನ್ವೆಸ್ಟ್ ಕರ್ನಾಟಕ ಕಂಪೆನಿ ಸ್ಥಾಪಿಸಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಆರ್. ವಿ.ದೇಶಪಾಂಡೆ ಹೇಳಿದರು.  ಕಂಪೆನಿಯ ಆರಂಭಿಕ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕಂಪೆನಿ ಸ್ಥಾಪಿಸುವ ಬಗ್ಗೆ ಘೋಷಿಸಿದ್ದರು. ಅದರಂತೆ ಇನ್ವೆಸ್ಟ್   ಕರ್ನಾಟಕ ಕಂಪೆನಿ ಪ್ರಾರಂಭಿ ಸಲಾಗಿದೆ. ಇದು ಬಂಡವಾಳ ಹೂಡಿಕೆಗೆ ಪೂರಕ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದೆ ಎಂದರು.  ಕಂಪೆನಿ ಅಧ್ಯಕ್ಷರಾಗಿ ಬೃಹತ್ ಕೈಗಾರಿಕಾ ಸಚಿವರು ಕಾರ್ಯನಿರ್ವಹಿಸಿದರೆ ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಕೈಗಾರಿಕಾ ಇಲಾಖೆ ಆಯುಕ್ತರು ಸರ್ಕಾರದ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ. ಅಲ್ಲದೆ ಕೈಗಾರಿಕಾ ವಲಯಕ್ಕೆ ಸೇರಿದ ಐದು ಮಂದಿ ಉದ್ಯಮಿಗಳನ್ನು ನಿರ್ದೇಶಕರಾಗಿ ಸದ್ಯದಲ್ಲೇ ನೇಮಕ ಮಾಡಲಾಗುವುದು. ಜೊತೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಹೆಚ್ಚೆಚ್ಚು ಬಂಡವಾಳ ಹೂಡಿಕೆಯಿಂದ ಹೊಸ ಕೈಗಾರಿಕೆಗಳು ಸ್ಥಾಪನೆಯಾಗುವುದಲ್ಲದೆ, ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ ಎಂದು ದೇಶಪಾಂಡೆ ತಿಳಿಸಿದರು.
ಸಭೆಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin