ಇಬ್ಬರು ಮಕ್ಕಳ ಕೊಂದು ತಂದೆ ಆತ್ಮಹತ್ಯೆ, ಮಂಡ್ಯದ ನಾಗಮಂಗಲದಲ್ಲಿ ಹೃದಯವಿದ್ರಾವಕ ಘಟನೆ

ಈ ಸುದ್ದಿಯನ್ನು ಶೇರ್ ಮಾಡಿ

Mandya--01

ನಾಗಮಂಗಲ, ಆ.23- ಕೌಟುಂಬಿಕ ಕಲಹದಿಂದ ನೊಂದು ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕೊಂದ ತಂದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಹೆಂಚನಕೊಪ್ಪಲು ಗ್ರಾಮದ ಜಯರಾಮ (45), ಸೌಭಾಗ್ಯ (4) ಮತ್ತು ಹರ್ಷಿತಾ (2) ಮೃತಪಟ್ಟವರು. ಜಯರಾಮ ವ್ಯವಸಾಯ ಮಾಡಿಕೊಂಡಿದ್ದು, ಇವರಿಗೆ ಇಬ್ಬರು ಪತ್ನಿಯರು. ಎಲ್ಲರೂ ಒಟ್ಟಾಗಿ ಒಂದೇ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಈ ನಡುವೆ ಕುಟುಂಬದಲ್ಲಿ ವಿನಾಕಾರಣ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಇದರಿಂದ ನೊಂದಿದ್ದ ಜಯರಾಮ ರಾತ್ರಿ ಎಲ್ಲರೂ ಊಟ ಮಾಡಿ ಮಲಗಿದ ನಂತರ ತನ್ನಿಬ್ಬರು ಮಕ್ಕಳನ್ನು ನೇಣು ಬಿಗಿದು ಸಾಯಿಸಿ ನಂತರ ಅವರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಜಯರಾಮನ ಪತ್ನಿ ಎದ್ದಾಗಲೇ ಈ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಸುತ್ತಮುತ್ತಲಿನವರು ಬೆಚ್ಚಿಬಿದ್ದಿದ್ದಾರೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನಾಗಮಂಗಲ ಸಿಪಿಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸ್ಥಳದಲ್ಲಿ ದೊರೆತ ಡೆತ್‍ನೋಟ್ ವಶಕ್ಕೆ ಪಡೆದಿದ್ದಾರೆ. ನಾಗಮಂಗಲ ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin