ಇಬ್ಬರು ಸಚಿವರನ್ನು ವಜಾಗೊಳಿಸಿದ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್

ಈ ಸುದ್ದಿಯನ್ನು ಶೇರ್ ಮಾಡಿ

Akhilesh

ಲಖನೌ. ಸೆ.12-ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಗಣಿ ಸಚಿವ ಗಾಯತ್ರಿ ಪ್ರಜಾಪತಿ ಮತ್ತು ಪಂಚಾಯತ್ ರಾಜ್ ಸಚಿವ ರಾಜ್‌ಕಿಶೋರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಜಾಗೊಳಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆಗೆ ಆದೇಶ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು ಎಂದು ಸಮಾಜವಾದಿ ಪಕ್ಷ ಸರ್ಕಾರ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ.  ಮುಖ್ಯಮಂತ್ರಿ ಅವರು ಇಬ್ಬರು ಸಚಿವರನ್ನು ವಜಾಗೊಳಿಸಿದ್ದಾರೆ. ಈ ಕುರಿತು ರಾಜಭವನಕ್ಕೆ ಪತ್ರವೊಂದನ್ನು ರವಾನಿಸಿದ್ದಾರೆ ಎಂದು ಉನ್ನತಾಕಾರಿಯೊಬ್ಬರು ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಗಳು ಮತ್ತು ವ್ಯಾಪಕ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಗಣಿ ಸಚಿವರ ಬಗ್ಗೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತೀವ್ರ ಅಸಮಾಧಾನಗೊಂಡಿದ್ದರು. ಸಚಿವರನ್ನು ವಜಾಗೊಳಿಸಿರುವುದು ಗಣಿ ವಲಯದಲ್ಲಿ ನಡೆದಿರುವ ದೊಡ್ಡ ಮಟ್ಟದ ಅಕ್ರಮಗಳನ್ನು ಮರೆಮಾಚಲು ಇದೊಂದು ಕಣ್ಣೊರೆಸುವ ತಂತ್ರ ಎಂದು ಪ್ರತಿಪಕ್ಷಗಳು ಟೀಕಿಸಿವೆ.

► Follow us on –  Facebook / Twitter  / Google+

Facebook Comments

Sri Raghav

Admin