ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಗುಣಮುಖ : ಗುರುಪೀಠದಲ್ಲಿ ವಿಶ್ರಾಂತಿ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಫೆ.13- ತುಮಕೂರು ಜಿಲ್ಲೆಯ ಹುಲಿಯೂರು ದುರ್ಗದ ಸಮೀಪದಲ್ಲಿ ಈತ್ತಿಚೆಗೆ ಆದಂತಹ ಅಪಘಾತದಲ್ಲಿ ಗಾಯಗೊಂಡಿದ್ದ ಭೋವಿ ಗುರು ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರು ಗುಣಮುಖರಾಗಿ ಮಠಕ್ಕೆ ಹಿಂದಿರುಗಿದ್ದಾರೆ.ಅಪಘಾತದ ಕೂಡಲೇ ಕುಣಿಗಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದರು. ಗುಣಮುಖರಾದ ಹಿನ್ನಲೆಯಲ್ಲಿ ಸ್ವಾಮೀಜಿ ಅವರು ಚಿತ್ರದುರ್ಗದಲ್ಲಿರುವ ಗುರುಪೀಠದಲ್ಲಿ ವಿಶ್ರಾಂತಿ ಪಡೆಯುವರು.  ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಆದಿ ಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ಕುಂಚಿಗಟಿಗ ಮಹಾ ಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ, ನಿಡುಮಾಮುಡಿ ಮಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ, ಯೋಗಗುರು ವಚನನಾಂದ ಸ್ವಾಮೀಜಿ, ಮಲ್ಲಾರಹಟ್ಟಿಯ ಓಂ ವೃಕ್ಷ ಮಠದ ತಿಪ್ಪೇರುದ್ರ ಸ್ವಾಮೀಜಿ ಸೇರಿದಂತೆ ಹಲವರು ಅವರ ಯೋಗ ಕ್ಷೇಮ ವಿಚಾರಿಸಿದ್ದಾರೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin