ಇರಾಕ್ ರಾಜಧಾನಿ ಬಾಗ್ದಾದ್’ನ ಮಾರುಕಟ್ಟೆಯಲ್ಲಿ ಅವಳಿ ಬಾಂಬ್ ಸ್ಫೋಟ : 21ಕ್ಕೂ ಹೆಚ್ಚು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Blast-at-Market

ಬಾಗ್ದಾದ್, ಡಿ. 31-ಎರಡು ಬಾಂಬ್‍ಗಳು ಸ್ಫೋಟಗೊಂಡು 21ಕ್ಕೂ ಹೆಚ್ಚು ಮಂದಿ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಇರಾಕ್ ರಾಜಧಾನಿ ಬಾಗ್ದಾದ್ ಮಧ್ಯಭಾಗದ ಮಾರುಕಟ್ಟೆಯಲ್ಲಿ ನಡೆದಿದೆ.  ಸೆಂಟ್ರಲ್ ಬಾಗ್ದಾದ್‍ನ ಅಲ್ ಸೆನಿಕ್ ಪ್ರದೇಶದಲ್ಲಿ ಸಂಭವಿಸಿದ ಈ ಅವಳಿ ಬಾಂಬ್ ಸ್ಫೋಟಗಳಲ್ಲಿ ಅನೇಕ ಅಂಗಡಿ-ಮುಂಗಟ್ಟುಗಳು ಧ್ವಂಸಗೊಂಡಿವೆ ಎಂದು ಇರಾಕಿ ಪೊಲೀಸರು ತಿಳಿಸಿದ್ದಾರೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಎಂದು ಪೆÇಲೀಸ್ ಕರ್ನಲ್ ಒಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ಇರಾಕ್‍ನ ವಿವಿಧೆಡೆ ಬಾಂಬ್ ದಾಳಿಗಳು ಮರುಕಳಿಸುತ್ತಿದ್ದು, ಅವಳಿ ಬಾಂಬ್ ಸ್ಫೋಟದ ಹಿಂದೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿಗಳ ಕೈವಾಡ ಇರಬಹುದು ಎಂದು ಶಂಕಿಸಲಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin