ಇರಾನ್‍ಗೆ ಅಮೆರಿಕ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Nikki--02

ವಿಶ್ವಸಂಸ್ಥೆ, ಜ.6-ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಸರಣಿ ಪ್ರತಿಭಟನೆಗಳಿಗೆ ಸಾಕ್ಷಿಯಾಗಿರುವ ಇರಾನ್‍ಗೆ ಅಮೆರಿಕ ಪರಿಸ್ಥಿತಿ ನಿಯಂತ್ರಣಕ್ಕಾಗಿ ತಾಕೀತು ಮಾಡಿದೆ. ನೀವೇನು ಮಾಡುತ್ತಿದ್ದೀರಿ ಎಂಬುದನ್ನು ವಿಶ್ವವು ಗಮನಿಸುತ್ತಿದೆ ಎಂದು ವಾಷಿಂಗ್ಟನ್ ಟೆಹರಾನ್‍ಗೆ ಎಚ್ಚರಿಕೆ ನೀಡಿದೆ. ಇಸ್ಲಾಮ್ ದೇಶದಲ್ಲಿ ಭಾರೀ ಪ್ರತಿಭಟನೆ ಮತ್ತು ಹಿಂಸಾಚಾರದಿಂದ ಉದ್ಭವಿಸಿರುವ ಸನ್ನಿವೇಶದ ಬಗ್ಗೆ ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಸಂಯುಕ್ತರಾಷ್ಟ್ರಗಳಿಗೆ ಅಮೆರಿಕ ರಾಯಭಾರಿಯಾಗಿರುವ ನಿಕ್ಕಿ ಹ್ಯಾಲೇ ಇರಾನ್‍ಗೆ ಸ್ಪಷ್ಟ ಎಚ್ಚರಿಕೆ ನೀಡಿದರು.

ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಈ ವಿದ್ಯಮಾನವು ಯಾವುದೇ ಆತಂಕ ಸೃಷ್ಟಿಸದಿರುವ ಕಾರಣ ಈ ಬಗ್ಗೆ ಚರ್ಚಿಸುವುದಕ್ಕೆ ಇದು ಸೂಕ್ತ ವೇದಿಕೆಯಲ್ಲ ಎಂದು 15 ಸದಸ್ಯ ರಾಷ್ಟ್ರಗಳ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆದಿರುವ ಫ್ರಾನ್ಸ್, ರಷ್ಯಾ ಮತ್ತು ಚೀನಾ ಸಭೆಯಲ್ಲಿ ತಿಳಿಸಿದವು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭದ್ರತಾ ಮಂಡಳಿಯಲ್ಲಿ ಬಿಸಿ ಬಿಸಿ ಚರ್ಚೆ ಮತ್ತು ಮಾತಿನ ಚಕಮಕಿ ನಡೆಯಿತು.

Facebook Comments

Sri Raghav

Admin