ಇರಾನ್‍ನಲ್ಲಿ ಭಾರೀ ಮಳೆ ಮತ್ತು ಭೀಕರ ಪ್ರವಾಹದಿಂದ 40ಕ್ಕೂ ಹೆಚ್ಚು ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Iran-Flood

ಟೆಹ್ರಾನ್, ಏ.16- ವಾಯುವ್ಯ ಇರಾನ್‍ನಲ್ಲಿ ಭಾರೀ ಮಳೆ ಮತ್ತು ಭೀಕರ ಪ್ರವಾಹದಿಂದ 40ಕ್ಕೂ ಹೆಚ್ಚು ಮಂದಿ ಮೃತಪಟ್ಟು ಎಂಟು ಮಂದಿ ಕಣ್ಮರೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.  ನಾಲ್ಕು ಪ್ರಾಂತ್ಯಗಳಲ್ಲಿ ಕುಂಭದ್ರೋಣ ಮಳೆ ನಂತರ ಭಾರೀ ಪ್ರವಾಹದಿಂದಾಗಿ 40 ಮಂದಿ ಮೃತಪಟ್ಟಿದ್ದಾರೆ ಎಂದು ಇರಾನಿನ ತುರ್ತು ಸ್ಪಂದನ ಸಂಘಟನೆಯ ಮುಖ್ಯಸ್ಥ ಇಸ್ಮಾಯಿಲ್ ನಾಜರ್ ಹೇಳಿದ್ದಾರೆ.


ಪೂರ್ವ ಅಜರ್‍ಬೈಜಾನ್ ಪ್ರಾಂತ್ಯದಲ್ಲಿ ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹದಿಂದ ನದಿ ಉಕ್ಕಿ ಹರಿಯುತ್ತಿದೆ. ಅನೇಕ ಮನೆಗಳು ಜಲಾವೃತವಾಗಿದೆ. ಹಲವಾರು ಕಾರುಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿವೆ. ಅಜಬ್‍ಶಿರ್ ಮತ್ತು ಅಜರ್‍ಶರಾರ್ ಜಿಲ್ಲೆಗಳು ನೆರೆ ಹಾವಳಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin