ಇವಿಎಂ ಕನ್ನ, ಆಮ್ ಆದ್ಮಿ ಆರೋಪ ಹಾಸ್ಯಾಸ್ಪದ : ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

minister-venkayya-naid

ನವದೆಹಲಿ,ಏ.26- ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿದ್ಯುನ್ಮಾನ ಮತ ಯಂತ್ರಗಳಿಗೆ(ಇವಿಎಂಗಳ) ಕನ್ನ ಹಾಕಿರುವುದೇ ಕಾರಣ ಎಂಬ ಆಮ್ ಆದ್ಮಿ ಪಕ್ಷದ ನಾಯಕನ ಹೇಳಿಕೆಯನ್ನು ಕೇಂದ್ರ ವಾರ್ತಾ ಸಚಿವ ಎಂ.ವೆಂಕಯ್ಯ ನಾಯ್ಡು ತಳ್ಳಿ ಹಾಕಿದ್ದಾರೆ. ಎಎಪಿ ಮುಖಂಡರ ಈ ಹೇಳಿಕೆ ಹಾಸ್ಯಾಸ್ಪದ ಎಂದು ಹೇಳಿರುವ ನಾಯ್ಡು, ಮತದಾರರು ಆ ಪಕ್ಷವನ್ನು ತಿರಸ್ಕರಿಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸಾಬೀತಾಗಿದೆ ಎಂದಿದ್ದಾರೆ.  ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಮೋದಿ ಅಲೆ ಕಾರಣವಲ್ಲ. ಇವಿಎಂ ಅಲೆ ಕಾರಣ ಎಂದು ಉಪಮುಖ್ಯಮಂತ್ರಿ  ಮನೀಷ್ ಸಿಸೋಡಿಯಾ ಸೇರಿದಂತೆ ಆಪ್ ಪಕ್ಷದ ಮುಖಂಡರು ಟೀಕಿಸಿದ್ದರು. ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.



ಮೋದಿ ಜನಪ್ರಿಯತೆಗೆ ಸಾಕ್ಷಿ:

ದೆಹಲಿ ಎಂಸಿಡಿ ಚುನಾವಣೆ ಫಲಿತಾಂಶವು ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ದೆಹಲಿಯಲ್ಲಿ ಮೋದಿ ಅಲೆ ಇರುವುದು ಇದರಿಂದ ಸಾಬೀತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕೋಲ್ಕತ್ತಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin