ಇಸ್ಲಾಂ ಭಯೋತ್ಪಾದನೆಯ ಮೂಲವಲ್ಲ : ಟ್ರಂಪ್‍ಗೆ ಜರ್ಮನ್ ಚಾನ್ಸಲರ್ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

Trump--01

ಬರ್ಲಿನ್, ಫೆ.21-ಇಸ್ಲಾಂ ಭಯೋತ್ಪಾದನೆ ಮೂಲವಲ್ಲ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮುಸ್ಲಿಂ ರಾಷ್ಟ್ರಗಳನ್ನೂ ಸೇರಿಸಿಕೊಳ್ಳುವುದು ಕೂಡ ಅಗತ್ಯವಾಗಿದೆ ಎಂದು ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ತಿರುಗೇಟು ನೀಡಿದ್ದಾರೆ.   ಟ್ರಂಪ್‍ರ ವಿವಾದಾತ್ಮಕ ನೀತಿಗಳ ಬಗ್ಗೆ ಆರಂಭದಿಂದಲೂ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಅವರು ಇಲ್ಲಿ ನಡೆದ ವಾರ್ಷಿಕ ಮುನಿಚ್ ಭದ್ರತಾ ಸಮಾವೇಶದಲ್ಲಿ ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಸಮ್ಮುಖದಲ್ಲೇ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿದರು.
ಭಯೋತ್ಪಾದನೆ ನೆಪವೊಡ್ಡಿ ಅಮೆರಿಕಕ್ಕೆ ಏಳು ಮುಸ್ಲಿಂ ರಾಷ್ಟ್ರಗಳ ಪ್ರಜೆUಳಿಗೆ ಪ್ರವೇಶ ನಿರ್ಬಂಧ ವಿಧಿಸಿದ್ದ ನೀತಿಯ ಔಚಿತ್ಯವನ್ನು ಪರೋಕ್ಷವಾಗಿ ಟೀಕಿಸಿದ ಮಾರ್ಕೆಟ್, ಇಸ್ಲಾಂ ಧರ್ಮದ ಸೋಗಿನಲ್ಲಿ ಭಯೋತ್ಪಾದನೆ ನಡೆಸುತ್ತಿರುವ ಉಗ್ರರನ್ನು ದಮನ ಮಾಡಲು ಏಕಾಂಗಿಯಾಗಿ ಯುರೋಪ್‍ಗೆ ಸಾಧ್ಯವಾಗುವುದಿಲ್ಲ. ಇದಕ್ಕೆ ಮುಸ್ಲಿಂ ದೇಶಗಳ ಸಹಕಾರ-ಬೆಂಬಲವೂ ಅಗತ್ಯವಾಗಿ ಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin