ಈಗಿನಿಂದಲೇ ಮುಂದಿನ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ ಸರ್ಕಾರ : ಹೆಚ್ಡಿಕೆ ಗಂಭೀರ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy

ಬೆಂಗಳೂರು, ಏ.20-ಸರ್ಕಾರ ಮುಂದಿನ ಚುನಾವಣೆಗಾಗಿ ಹಣ ಸಂಗ್ರಹ ಮಾಡುತ್ತಿದೆ. ನೀರಾವರಿ ಸೇರಿದಂತೆ ಅನೇಕ ಯೋಜನೆಗಳಲ್ಲಿ ಕಮೀಷನ್ ಹೊಡೆಯಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.  ಜೆ.ಪಿ.ಭವನದಲ್ಲಿಂದು ಉಪ್ಪಾರ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಕನಿಷ್ಠ ಡಿಪಿಆರ್ ಮಾಡಿದ ಯೋಜನೆಗಳಿಗೆ ಕೋಟ್ಯಂತರ ರೂ. ಖರ್ಚು ಮಾಡಿದ್ದಾರೆ. ಪ್ರತಿ ಯೋಜನೆಯಲ್ಲಿ ಕಮೀಷನ್ ಪಡೆಯಲಾಗುತ್ತಿದೆ. ಅಲ್ಲದೆ ಸರ್ಕಾರದ ಹಲವಾರು ಯೋಜನೆಗಳ ಹೆಸರಲ್ಲಿ ಜನರ ತೆರಿಗೆ ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂದು ದೂರಿದರು. ಇದರಿಂದ ಜನರಿಗೆ ಅನುಕೂಲವಾಗುತ್ತೋ, ಅನಾನುಕೂಲವಾಗುತ್ತದೆಯೋ ಎನ್ನುವುದನ್ನು ಸಹ ಯೋಚಿಸುತ್ತಿಲ್ಲ. ಇಂತಹ ಕೃತ್ಯಗಳ ಮೂಲಕ ಮುಂದಿನ ಚುನಾವಣೆಗೆ ಹಣ ಸಂಗ್ರಹಿಸಲಾಗುತ್ತಿದೆ.ಡಿಸಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಜಿಲ್ಲಾ ಉಸ್ತುವಾರಿ ಸಚಿವರು ಬರಗಾಲ ಪೀಡಿತ ಗ್ರಾಮಗಳಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.   ಸರ್ಕಾರದ ಮಾಡಿದ ಕೆಲಸಗಳಿಗೆ ಪ್ರಚಾರ ಪಡೆದಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಆದರೆ ಪ್ರತಿದಿನವೂ ಮಾಧ್ಯಮಗಳಲ್ಲಿ ಜಾಹೀರಾತು ಬರುತ್ತಿರುವುದನ್ನು ಏನೆಂದು ಹೇಳಬೇಕು ಎಂದು ಪ್ರಶ್ನಿಸಿದರು. ಸ್ಟೀಲ್ ಬ್ರಿಡ್ಜ್ ಬದಲಿಗೆ ಟನಲ್ ರೋಡ್ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಎಚ್‍ಡಿಕೆ, ನನ್ನ ಅವಧಿಯಲ್ಲಿ 800 ಕೋಟಿ ರೂ.ಗಳಲ್ಲಿ ಟನಲ್‍ರೋಡ್ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಈಗ ಸರ್ಕಾರ 3,500 ಕೋಟಿ ರೂ. ವೆಚ್ಚದಲ್ಲಿಟ ಟನಲ್ ರೋಡ್ ನಿರ್ಮಿಸಲು ಹೊರಟಿದೆ. ಹಣವನ್ನು ಈ ಸರ್ಕಾರ ಯಾವ ರೀತಿ ದುಂದುವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದರು.

ಗೂಟದ ಕಾರು ನಿಷೇಧಕ್ಕೆ ಸ್ವಾಗತ:

ಕೇಂದ್ರ ಸರ್ಕಾರದಿಂದ ಗೂಟದ ಕಾರು ನಿಷೇಧಕ್ಕೆ ಕ್ರಮಕೈಗೊಂಡಿರುವುದು ಸ್ವಾಗತಾರ್ಹ. ಜನರಿಂದ ಆಯ್ಕೆಯಾಗಿ ಬಂದ ರಾಜಕಾರಣಿಗಳು ಸಾಮಾನ್ಯ ಜನರಂತೆ ಇರಬೇಕು ಎಂದು ಅಭಿಪ್ರಾಯಪಟ್ಟರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin