ಈರುಳ್ಳಿ ಖರೀದಿಗೆ ಮುಂದಾದ ರಾಜ್ಯ ಸರ್ಕಾರ, 50 ಕೋಟಿ ರೂ. ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Onion-Price

ಬೆಂಗಳೂರು, ಅ.28-ಈರುಳ್ಳಿ ದರ ತೀವ್ರ ಕುಸಿದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಈರುಳ್ಳಿ ಖರೀದಿ ಮಾಡುವ ಮೂಲಕ ರೈತರ ನೆರವಿಗೆ ಧಾವಿಸಿರುವ ಸರ್ಕಾರ ಈ ಸಂಬಂಧ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.2 ರಿಂದ ಈರುಳ್ಳಿ ಖರೀದಿ ಪ್ರಕ್ರಿಯೆಯನ್ನು ಮಾರುಕಟ್ಟೆ ಫೆಡರೇಷನ್ ವತಿಯಿಂದ ಮಾಡಲಾಗುವುದು. ಪ್ರತಿ ಕೆಜಿಗೆ 6.24 ರೂ. ದರ ನೀಡಿ ಖರೀದಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೂರೂವರೆ ಲಕ್ಷ ಎಕರೆಯಲ್ಲಿ ಬೆಳೆದ ಈರುಳ್ಳಿ ಬೆಳೆ ಇದೆ. 23 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಕೇವಲ 1 ಲಕ್ಷ ಟನ್ ಖರೀದಿಗೆ ಮಾತ್ರ ನೆರವು ನೀಡಲಿದೆ. ಉಳಿದ ಎಲ್ಲಾ ಈರುಳ್ಳಿಯನ್ನು ರಾಜ್ಯ ಸರ್ಕಾರವೇ ಖರೀದಿ ಮಾಡಲಿದೆ. ದರ ಕುಸಿದಿರುವ ಹಿನ್ನೆಲೆಯಲ್ಲಿ ದರ ಸ್ಥಿರವಾಗುವವರೆಗೆ ಸರ್ಕಾರ ಈರುಳ್ಳಿ ಖರೀದಿ ಮಾಡಲಿದೆ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin