ಈಶ್ವರಪ್ಪಗೆ ಅಮಿತ್ ಷಾ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah-Eshwarappa
ಬೆಂಗಳೂರು,ಏ.4-ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ನಿರೀಕ್ಷೆಗೆ ತಕ್ಕಂತೆ ಜನ ಆಗಮಿಸದೆ ಹೋಗಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಹಾಗೂ ಪ್ರಭಾವಿ ಕುರುಬ ಜನಾಂಗದ ಮುಖಂಡ ಈಶ್ವರಪ್ಪ ವಿರುದ್ದ ಗರಂ ಆಗಿದ್ದಾರೆ. ಕಾಗಿನೆಲೆ ಕನಕ ಪೀಠದ ಶ್ರೀ ನಿರಂಜನಂದಾಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಲು ಅವಕಾಶ ಸಿಗದೆ ಹೋಗಿದ್ದಕ್ಕೆ ಅಮಿತ್ ಷಾ ತೀವ್ರ ಬೇಸರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರನ್ನು ಅವರು ತರಾಟೆಗೆ ತೆಗೆದುಕೊಂಡರೆಂದು ತಿಳಿದುಬಂದಿದೆ.

ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಒಂದು ಲಕ್ಷ ಜನ ಸೇರುತ್ತಾರೆ ಎಂದು ನೀವೇ ಹೇಳಿದ್ದಿರಿ. ಕಾರ್ಯಕ್ರಮ ಯಶಸ್ವಿಗೆ ಪಕ್ಷವು ಎಲ್ಲ ನೆರವನ್ನು ನೀಡಿತ್ತು. ಆದರೂ ನಿರೀಕ್ಷಿಸಿದಷ್ಟು ಜನ ಆಗಮಿಸಲಿಲ್ಲ ಏಕೆ? ಇದಕ್ಕೆ ಕಾರಣವೇನು ಎಂದು ಷಾ ಪ್ರಶ್ನಿಸಿದ್ದಾರೆ. ನೀವು ಹಿಂದುಳಿದ ವರ್ಗದ ಪ್ರಭಾವಿ ನಾಯಕರಾಗಿದ್ದುಕೊಂಡು ಇಂತಹ ಒಂದು ಕಾರ್ಯಕ್ರಮ ಯಶಸ್ವಿಗೊಳಿಸಲು ಆಗದಿದ್ದ ಮೇಲೆ ನೀವೆಂಥ ನಾಯಕರು ಎಂದು ಷಾ ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆಂದು ಬಲ್ಲ ಮೂಲಗಳು ತಿಳಿಸಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin