ಈಶ್ವರಪ್ಪ ಪಿಎ ಅಪಹರಣ ಯತ್ನ ಪ್ರಕರಣ : 2ನೇ ದಿನವೂ ಸಂತೋಷ್ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Santosh-PA-Yadiyurappa

ಬೆಂಗಳೂರು,ಆ.11-ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕನ ಅಪಹರಣ ಯತ್ನ ಪ್ರಕರಣ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರ ಸಂಬಂಧಿ ಸಂತೋಷ್ ಅವರು 2ನೇ ದಿನವಾದ ಇಂದು ಕೂಡ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದರು.
ಸಂತೋಷ್ ಅವರಿಗೆ ಸುಮಾರು 50 ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಪಹರಣ ಯತ್ನ ಪ್ರಕರಣದಲ್ಲಿ ತಮ್ಮ ಹೆಸರನ್ನು ಲಿಂಕ್ ಮಾಡಿರುವುದಕ್ಕೆ ಆಘಾತ ವ್ಯಕ್ತ ಪಡಿಸಿರುವ ಸಂತೋಷ್, ಅದರಲ್ಲಿ ತಮ್ಮ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಬೆಂಗಳೂರು ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಅರಸ್ ಹಾಗೂ ವಿನಯ್ ನನಗೆ ಆಪ್ತ ಸ್ನೇಹಿತರು. ಸ್ಥಳೀಯವಾಗಿ ಪಕ್ಷ ಸಂಘಟಿಸುವಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೆವು. ವಿನಯ್ ಅಪಹರಣ ಯತ್ನಕ್ಕೂ ನನಗೂ ಸಂಬಂಧವಿಲ್ಲ ಎಂದು ಸಂತೋಷ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಆ.7ರಂದು ಸಂತೋಷ್ಗೆ ನೋಟಿಸ್ ನೀಡಿದ್ದರು. ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡ ಎಸಿಪಿ ಆನಂದ್ ಬಡಿಗೇರ್‍ನೇತೃತ್ವದ ತಂಡ ಪುನಃ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳುಹಿಸಿದೆ. ಯಾವುದೋ ಸಿ.ಡಿಗಾಗಿ ವಿನಯ್‍ಅಪಹರಣಕ್ಕೆ ಯತ್ನಿಸಲಾಯಿತು ಎಂದು ಕೇಳಿದ್ದಕ್ಕೆ ಯಾವ ಸಿ.ಡಿಯ ಬಗ್ಗೆಯೂ ನನಗೆ ಗೊತ್ತಿಲ್ಲ. ಈಗಲೂ ನಾವೂ ಪಕ್ಷ ಸಂಘಟಿಸುವ ಸ್ನೇಹಿತರು ಎಂದು ಹೇಳಿದ್ದಾರೆ.

ವಿವಿಧ ಕೋನಗಳಲ್ಲಿ ಪ್ರಶ್ನೆಗಳನ್ನು ಕೇಳಿದ್ದೇವೆ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದು, ಇಡೀ ಪ್ರಕರಣದ ಕೇಂದ್ರ ಬಿಂದುವಾಗಿರುವ ಸಿಡಿ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಶುಕ್ರವಾರದ ವಿಚಾರಣೆಯಲ್ಲಿ ಸಿ.ಡಿ. ಬಗ್ಗೆ ಪ್ರಶ್ನೆಗಳನ್ನು ಕೇಳಲು ತನಿಖಾ ತಂಡ ನಿರ್ಧರಿಸಿದೆ ಎನ್ನಲಾಗುತ್ತಿದೆ. ವಿಚಾರಣೆ ವೇಳೆ ಇಡೀ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿದೆ.

Facebook Comments

Sri Raghav

Admin