ಈ ಅವಕಾಶವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳದಂತೆ ಎಚ್ಚರದಿಂದಿರಲು ಸಿಎಂಗೆ ದಿಗ್ಗಿ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

C-M-Diggi

ಬೆಂಗಳೂರು, ಸೆ.13- ರಾಜ್ಯದಲ್ಲಿ ವಿಛಿದ್ರಕಾರಕ ಶಕ್ತಿಗಳು ಶಾಂತಿ-ಸುವ್ಯವಸ್ಥೆ ಕದಡುವಂತಹ ಕೆಲಸ ಮಾಡುತ್ತಿವೆ. ಬಿಜೆಪಿ ಈ ಅವಕಾಶವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‍ಸಿಂಗ್ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಾವೇರಿ ವಿವಾದವನ್ನು ರಾಜಕೀಯ ಅಸ್ತ್ರವನ್ನಾಗಿ ವಿಪಕ್ಷಗಳು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ ವಿಛಿದ್ರಕಾರಕ ಶಕ್ತಿಗಳು ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಕೆಲಸಕ್ಕೆ ಮುಂದಾಗಿವೆ. ಶಾಂತಿ-ಸುವ್ಯವಸ್ಥೆ ಕಾಪಾಡುವ ಕೆಲಸವನ್ನು ತಾವು ಮಾಡಬೇಕು. ಸಚಿವರೊಬ್ಬರನ್ನು ತಮಿಳುನಾಡಿಗೆ ಕಳುಹಿಸಿ ಎರಡೂ ರಾಜ್ಯಗಳ ನಡುವೆ ಸೌಹಾರ್ದ ವಾತಾವರಣ ಮೂಡಿಸುವಂತೆ ಮಾಡಬೇಕು.

ರಾಜಧಾನಿಯಲ್ಲಿ ಅಶಾಂತಿ ವಾತಾವರಣ ಉಂಟಾಗಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಚಿವರ ತಂಡ ರಚಿಸಿ ಶಾಂತಿ ನೆಲೆಗೊಳ್ಳುವಂತೆ ಮಾಡಬೇಕೆಂಬ ಸಲಹೆ ನೀಡಿದ್ದಾರೆ.
ಕಾವೇರಿ ವಿವಾದ ಭಾವನಾತ್ಮಕ ವಿಷಯವಾಗಿದ್ದು, ಭಾವನಾತ್ಮಕವಾಗಿಯೇ ಜನರ ಮನವೊಲಿಸಿ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin