ಈ ಬಾರಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-BJP

ಹುಬ್ಬಳ್ಳಿ, ನ.19- ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಯಶಸ್ಸು ಸಾಧಿಸಿ ರಾಜ್ಯದಅಧಿಕಾರ ಚುಕ್ಕಾಣಿ ಹಿಡಿ ಯುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ತೆಲೆ ಕೆಡಿಸಿಕೊಳ್ಳುವುದಿಲ್ಲ. ರಾಜ್ಯದ ಜನತೆಯ ಹಿತ ನಮಗೆ ಮುಖ್ಯ. ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟು, ಆರ್ಥಿಕ ದಿವಾಳಿಯಾಗಿದೆ. ಮುಖ್ಯಮಂತ್ರಿ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ರೈತರ ಸಾಲ ಮನ್ನಾಗೆ ಯಡಿಯೂರಪ್ಪ ವಿರೋಧಿಸಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ತುಂಬಾ ದೊಡ್ಡವರು ಅವರ ಬಗ್ಗೆ ನಾನೇನು ಹೇಳುವುದಿಲ್ಲ ಎಂದರು.

ರಾಜ್ಯ ಭೀಕರ ಬರಗಾಲ ಎದುರಿಸು ತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಹಾರ ಕ್ರಮಕ್ಕೆ ಮುಂದಾಗಬೇಕು. ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಸಿಎಂ ಕುಂಟು ನೆಪ ಹೇಳು ವುದನ್ನು ಬಿಟ್ಟು ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲಿ, ಸಿಎಂ ಸಿದ್ದರಾಮಯ್ಯ ತುರ್ತು ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು. ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರದಲ್ಲಿ ಬಿಜೆಪಿ ಬದ್ಧವಾಗಿದೆ. ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷಗಳು ಕೈಜೋಡಿಸಿದರೆ, ಇಪ್ಪತ್ತನಾಲ್ಕು ಗಂಟೆಗಳಲ್ಲಿ ವಿವಾದ ಬಗೆಹರಿಯುತ್ತದೆ. ಬೆಳಗಾವಿ ಅಧಿವೇಶನದಲ್ಲಿ ಯೋಜನೆ ಕುರಿತು ಚರ್ಚೆಗೆ ಮಾಡಬೇಕು.

ಪ್ರತಿಯೊಂದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸಿವುದನ್ನು ಸಿಎಂ ಸಿದ್ದರಾಮಯ್ಯ ಬಿಡಬೇಕು. ಕೇಂದ್ರ ಸರಕಾರ ಈಗಾಗಲೇ ರಾಜ್ಯಕ್ಕೆ ಎಲ್ಲ ನೆರವನ್ನು ನೀಡಿದೆ ಎಂದರು. ಮಾಜಿ ಸಚಿವ ಸಿ.ಸಿ. ಪಾಟೀಲ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪಹಾಲಹರವಿ, ಎಸ್. ಐ. ಚಿಕ್ಕನಗೌಡರ, ಬಾಬಾ ಗೌಡ ಪಾಟೀಲ, ಶಂಕ್ರಪ್ಪ ಬಿಜವಾಡ, ಮಹೇಶ ಟೆಂಗಿನಕಾಯಿ ಗ್ರಾಮೀಣ ಬಿಜೆಪಿ ಈರಣ್ಣ ಜಡಿ, ವಿರೇಶ ಸಂಗಳದ, ಗೋಪಾಲ ಬದ್ದಿ, ಹನಮಂತಪ್ಪ ದೊಡ್ಡಮನಿ, ಈರಣ್ಣ ಜಡಿ ಹಾಜರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin