ಈ ವಾರಾಂತ್ಯದಲ್ಲಿ ಟ್ರಂಪ್ ಸೌದಿ ಪ್ರವಾಸ : ಭಯೋತ್ಪಾದನೆ ನಿಗ್ರಹಕ್ಕೆ ಮುಸ್ಲಿಂ ನಾಯಕರ ಜೊತೆ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Trump

ವಾಷಿಂಗ್ಟನ್, ಮೇ 18-ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಈ ವಾರಾಂತ್ಯದಲ್ಲಿ ಸೌರಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ. ಅಮೆರಿಕ ಅಧ್ಯಕ್ಷರಾದ ಬಳಿಕ ಅವರು ಕೈಗೊಳ್ಳುತ್ತಿರುವ ಪ್ರಥಮ ವಿದೇಶಿ ಪ್ರವಾಸ ಇದಾಗಿದೆ.  ಭಯೋತ್ಪಾದನೆ ಮತ್ತು ಉಗ್ರವಾದದ ವಿರುದ್ಧ ಪ್ರಬಲ ಹೋರಾಟ ನಡೆಸುವ ಅಗತ್ಯತೆ ಇದೆ ಎಂದು ಸೌದಿ ಭೇಟಿ ವೇಳೆ ಟ್ರಂಪ್ ಮುಸ್ಲಿಂ ರಾಷ್ಟ್ರಗಳ ನಾಯಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. ಸೌದಿ ಪ್ರವಾಸದ ವೇಳೆ ಟ್ರಂಪ್ 50ಕ್ಕೂ ಹೆಚ್ಚು ಮುಸ್ಲಿಂ ದೇಶಗಳ ಅಧಿಪತಿಗಳು ಮತ್ತು ಧುರೀಣರೊಂದಿಗೆ ಭೋಜನ ಕೂಟದಲ್ಲಿ ಟ್ರಂಪ್ ಭಾಗವಹಿಸುವರು. ಈ ಸಂದರ್ಭದಲ್ಲಿ ಅವರು ಎಲ್ಲ ದೇಶಗಳಿಗೂ ಕಂಟಕವಾಗಿರುವ ಭಯೋತ್ಪಾದನೆಯನ್ನು ನಿಗ್ರಹಿಸುವ ಅಗತ್ಯವನ್ನು ಪ್ರತಿಪಾದಿಸಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin