ಉಗ್ರರಿಂದ ಚೂರಿ ಇರಿತ, 8 ಜನರ ಸಾವು, ಗುಂಡಿಕ್ಕಿ ಮೂವರು ಉಗ್ರರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

8Killed-01

ಬೀಜಿಂಗ್, ಫೆ.15-ಮೂವರು ಉಗ್ರರು ಚಾಕುಗಳಿಂದ ನಡೆಸಿದ ಭೀಕರ ದಾಳಿಯಲ್ಲಿ ಎಂಟು ಜನ ಮೃತಪಟ್ಟು, ಕೆಲವರು ತೀವ್ರ ಗಾಯಗೊಂಡಿರುವ ಘಟನೆ ಚೀನಾದ ಕ್ಸಿನ್‍ಜಿಯಾಂಗ್ ಪ್ರಾಂತ್ಯದಲ್ಲಿ ನಡೆದಿದೆ. ನಂತರ ಪೊಲೀಸರು ನಡೆಸಿದ ಪ್ರತಿ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಪಿಶಾನ್ ಕೌಂಟಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಉಘುರ್ ಉಗ್ರಗಾಮಿಗಳಿಂದ ಈ ದಾಳಿ ನಡೆದಿದೆ. ಚಾಕುಗಳನ್ನು ಹೊಂದಿದ್ದ ಉಗ್ರರು 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದರು. ಇವರಲ್ಲಿ ಐವರು ಮೃತಪಟ್ಟರು ಎಂದು ವಾರ್ತಾ ವಾಹಿನಿಯೊಂದು ವರದಿ ಮಾಡಿದೆ. ನಂತರ ಕಾರ್ಯಪ್ರವೃತ್ತರಾದ ಪೊಲೀಸರ ಗುಂಡೇಟಿನಿಂದ ಮೂವರು ಉಗ್ರರು ಹತರಾದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin