ಉಗ್ರರಿಗೆ ಹಣಕಾಸು ನೆರವು ನೀಡಿದ ನೀಡಿದ ಪ್ರಕರಣದಲ್ಲಿ ಹುರಿಯತ್ ನಾಯಕರ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

NIA--01

ನವದೆಹಲಿ, ಮೇ 29-ಲಷ್ಕರ್-ಎ-ತೊಯ್‍ಬಾ (ಎಲ್‍ಇಟಿ) ಮತ್ತು ಜಮಾತ್ ಉದ್-ದವಾ (ಜೆಯುಡಿ) ಸೇರಿದಂತೆ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಮ್ಮು ಮತ್ತು ಕಾಶ್ಮೀರದ ಇಬ್ಬರು ಪ್ರತ್ಯೇಕತಾವಾದಿ ನಾಯಕರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ದೆಹಲಿಯಲ್ಲಿ ಇಂದು ವಿಚಾರಣೆಗೆ ಒಳಪಡಿಸಿದೆ. ತೆಹ್ರೀಕ್-ಎ-ಹುರಿಯತ್‍ನ ನಾಯಕರಾದ ಫಾರೂಕ್ ಅಹಮದ್ ದರ್ ಅಲಿಯಾಸ್ ಬಿಟ್ಟಾ ಕರಾಟೆ ಹಾಗೂ ಜಾವೇದ್ ಅಹಮದ್ ಬಾಬಾ ಅಲಿಯಾಸ್ ಗಾಜಿ ಇಂದು ದೆಹಲಿಯಲ್ಲಿ ಎನ್‍ಐಎ ಮುಂದೆ ಹಾಜರಾಗಿ ವಿಚಾರಣೆಗೆ ಒಳಪಟ್ಟರು.ವಿಚಾರಣೆ ಸಂದರ್ಭದಲ್ಲಿ ಕೆಲವು ಬ್ಯಾಂಕ್ ದಾಖಲೆ ಪತ್ರಗಳು ಮತ್ತು ಆಸ್ತಿಗೆ ಸಂಬಂಧಪಟ್ಟ ದಸ್ತಾವೇಜುಗಳನ್ನು ಎನ್‍ಐಎ ಅಧಿಕಾರಿಗಳು ಪರಿಶೀಲಿಸಿದರು.
ಉಗ್ರರಿಗೆ ಹಣಕಾಸು ನೆರವು ನೀಡಿದ ಮತ್ತು ಕಾಶ್ಮೀರ ಕಣಿವೆಯಲ್ಲಿ ಬುಡಮೇಲು ಕೃತ್ಯಗಳಲ್ಲಿ ತೊಡಗಿದ ಆರೋಪಗಳ ಮೇಲೆ ವಿಚಾರಣೆಗೆ ಹಾಜರಾಗುವಂತೆ ಎನ್‍ಐಎ ಸೂಚಿಸಿತ್ತು. ಈ ತಿಂಗಳ ಆರಂಭದಲ್ಲೂ ಇವರನ್ನು ಅಧಿಕಾರಿಗಳು ಸತತ ನಾಲ್ಕು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin