ಉಗ್ರ ಇಮ್ರಾನ್‍ಗೆ ನಾಳೆ ಶಿಕ್ಷೆ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

Bilal

ಬೆಂಗಳೂರು, ಅ.4-ನಗರದಲ್ಲಿ ಉಗ್ರ ಕೃತ್ಯ ಸಂಚು ರೂಪಿಸಿದ್ದ ಇಮ್ರಾನ್ ಬಿಲಾಲ್ ಅಪರಾಧಿ ಎಂದು ಸಾಬೀತಾಗಿದ್ದು, ಇಲ್ಲಿನ 56ನೆ ಸೆಷನ್ ಕೋರ್ಟ್ ನಾಳೆ ಶಿಕ್ಷೆ ಪ್ರಮಾಣವನ್ನು ಘೋಷಿಸಲಿದೆ.2008ರಲ್ಲಿ 56ನೆ ಸೆಷನ್ ಕೋರ್ಟ್ ನ್ಯಾಯಾಧೀಶರಾದ ಎನ್. ಕೊಟ್ರಯ್ಯ ಅವರು ನಾಳೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದ್ದಾರೆ.2008ರಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸಲು ಇಮ್ರಾನ್ ಬಿಲಾಲ್ ಸಂಚು ರೂಪಿಸಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಹಾಗೂ ಜೆ.ಜೆ.ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.ಈತನಿಂದ ಎ.ಕೆ.56 ಗ್ರೇನೆಡ್ ಬಾಂಬ್, ಸ್ಯಾಟ್‍ಲೈಟ್ ಪೊನ್ ವಶಪಡಿಸಿಕೊಂಡಿದ್ದರು. ಈತನ ದುಷ್ಕoತ್ಯ ದ ಬಗ್ಗೆ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಿದ್ದು, ನಾಳೆ ಶಿಕ್ಷೆ ಪ್ರಕಟಿಸಲಿದೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin