ಉಡುಪಿ ಕೃಷ್ಣನ ದರ್ಶನ ಪಡೆದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್

ಈ ಸುದ್ದಿಯನ್ನು ಶೇರ್ ಮಾಡಿ

Manohar-aprikkar

ಉಡುಪಿ, ಡಿ.25- ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಕೃಷ್ಣ ಮಠಕ್ಕೆ ತೆರಳಿ ದರ್ಶನ ಪಡೆದರು.  ಹೆಜಮಾಡಿಯಲ್ಲಿ ಹಮ್ಮಿಕೊಂಡಿ ರುವ ಜಿಎಸ್‍ಬಿ ವಿಶ್ವ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ಮೊದಲು ಕೃಷ್ಣ ಮಠಕ್ಕೆ ತೆರಳಿ ಶ್ರೀ ಕೃಷ್ಣನ ದರ್ಶನ ಪಡೆದು. ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಕೃಷ್ಣನ ದರ್ಶನದಿಂದ ಮತ್ತಷ್ಟು ಶಕ್ತಿ ಬಂದಂತಾಗಿದೆ. ದೇಶದಲ್ಲಿ ನೋಟ್ ಬ್ಯಾನ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರದ ನಡೆಯನ್ನು ಒಪ್ಪದ ಮಂದಿ ಇದನ್ನು ವಿರೋಧಿಸುತ್ತಿದ್ದಾರೆ. ಆದರೆ, ಬಡ ಜನರು ನಮ್ಮ ಸರ್ಕಾರದ ನಡೆಯನ್ನು ಸ್ವಾಗತಿಸಿದ್ದಾರೆ. ಈ ದೂರಗಾಮಿ ಪ್ರಯೋಜನವನ್ನು ಸಾರ್ವಜನಿಕರು ಅರ್ಥ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಉತ್ತಮ ಯೋಜನೆ ರೂಪಿಸಿದ್ದಾರೆ ಎಂದು ಹೇಳಿದರು.

ಜಿಎಸ್‍ಬಿ ಸಮ್ಮೇಳನದಲ್ಲಿ ದೇಶದ ರಕ್ಷಣೆಗಾಗಿ ಒಂದು ಕೋಟಿ ರೂ.ಗಳನ್ನು ಸಮುದಾಯದ ವತಿಯಿಂದ ಪರಿಕ್ಕರ್ ಅವರಿಗೆ ನೀಡಲಾಯಿತು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin