ಉಡುಪಿ : ಸೈನೈಡ್ ಸೇವಿಸಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Family-Suicide--01

ಉಡುಪಿ, ಜು.13- ಚಿನ್ನಾಭರಣ ಮಳಿಗೆಯ ವ್ಯಾಪಾರಿಯೊಬ್ಬರು ವ್ಯವಹಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಾಲೂಕಿನ ಶಿರ್ವ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಂಕರ ಆಚಾರ್ಯ (50), ನಿರ್ಮಲಾ ಆಚಾರ್ಯ (44), ಶ್ರೇಯಾ (22) ಹಾಗೂ ಶೃತಿ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಡುಬೆಳ್ಳೆಯಲ್ಲಿ ಚಿನ್ನಾಭರಣ ಅಂಗಡಿ ಇಟ್ಟುಕೊಂಡಿದ್ದ ಶಂಕರ ಆಚಾರ್ಯ ಅವರು ವ್ಯವಹಾರದಲ್ಲಿ ಉಂಟಾದ ನಷ್ಟದ ಹಿನ್ನೆಲೆಯಲ್ಲಿ ಹೆಂಡತಿ ಹಾಗೂ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸೈನೆಡ್ ಸೇವಿಸಿ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Suicide-cv-01

Facebook Comments

Sri Raghav

Admin