ಉತ್ತರಪ್ರದೇಶದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್

ಈ ಸುದ್ದಿಯನ್ನು ಶೇರ್ ಮಾಡಿ

Yogi-Adityanath

ಲಕ್ನೋ, ಮಾ.19-ಉತ್ತರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಖರ ಹಿಂದುತ್ವವಾದಿ ಯೋಗಿ ಆದಿತ್ಯನಾಥ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲಕ್ನೋದ ಸ್ಮತಿ ಉಪವನದಲ್ಲಿ ಮಧ್ಯಾಹ್ನ 2.15ರಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ರಾಮ್ ನಾಯಕ್ ಯೋಗಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರೊಂದಿಗೆ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡರು.

ಯೋಗಿ ಆದಿತ್ಯನಾಥ್ ಇಂದು ಬೆಳಗ್ಗೆಯೇ ಲಕ್ನೋನ ಸ್ಮತಿ ಉಪವನಕ್ಕೆ ತೆರಳಿ ಪ್ರಮಾಣ ವಚನ ಸಮಾರಂಭ ನಡೆಯುವ ಸ್ಥಳವನ್ನು ಖುದ್ದಾಗಿ ಪರಿಶೀಲಿಸಿ, ಸಿದ್ದತೆಗಳನ್ನು ಅಂತಿಮಗೊಳಿಸಿದ್ದರು.   ಸಾಧ್ವಿ ಉಮಾ ಭಾರತಿ ನಂತರ ಯೋಗಿ ಆದಿತ್ಯನಾಥ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗುತ್ತಿರುವ ಎರಡನೇ ಸನ್ಯಾಸಿಯಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin