ಉತ್ತರಾಖಂಡ್‍ನಲ್ಲಿ ಅರಳಿದ ಕಮಲ

ಈ ಸುದ್ದಿಯನ್ನು ಶೇರ್ ಮಾಡಿ

UttarKhand--01

ಡೆಹ್ರಡೂಮ್,ಮಾ.11-ನಿರೀಕ್ಷೆಯಂತೆ ಗಿರಿಶಿಖರಗಳ ನಾಡು ಉತ್ತರಾಖಂಡ್‍ನಲ್ಲಿ ಬಿಜೆಪಿ ಭಾರೀ ಬಹುಮತದ ಮೂಲಕ ಅಧಿಕಾರದ ಗದ್ದುಗೆ ಹಿಡುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಎರಡನೇ ಮೂರಕ್ಕೂ ಅಧಿಕದಷ್ಟು ಅಂದರೆ 51 ವಿಧಾನಸಭಾ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿದೆ.   ಆಡಳಿತಾರೂಢ ಕಾಂಗ್ರೆಸ್ ಕೇವಲ 16 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಬಿಎಸ್‍ಪಿ ಸೇರಿದಂತೆ ಇತರರು ಮೂರು ಕ್ಷೇತ್ರಗಳಲ್ಲಿ ಮಾತ್ರ ವಿಜೇತರಾಗಿದ್ದಾರೆ.

ಕಳೆದ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್ ಆಡಳಿತಾ ವಿರೋಧಿ ಅಲೆ, ಕಾಂಗ್ರೆಸ್‍ನ ಒಳಜಗಳ, ಪ್ರವಾಹ ನಿರ್ವಹಣೆಯಲ್ಲಿ ವಿಫಲವಾಗಿದ್ದು , ಸಚಿವರ ಮೇಲೆ ಕೇಳಿ ಬಂದ ಸಾಲು ಸಾಲು ಹಗರಣಗಳು ಕಾಂಗ್ರೆಸ್‍ಗೆ ದುಬಾರಿಯಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಲೆ ವ್ಯವಸ್ಥಿತ ಪ್ರಚಾರ, ಟಿಕೆಟ್ ಹಂಚಿಕೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆಯನ್ನಿಟ್ಟ ಪರಿಣಾಮ ಬಿಜೆಪಿ ಗೆಲುವು ಸಾಧಿಸಿದೆ.   ಕಳೆದ ವರ್ಷ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಬಂಡೆದಿದ್ದ ಶಾಸಕರ ಅನರ್ಹತೆ, ಸತತವಾಗಿ ಎರಡು ವರ್ಷ ಉಂಟಾದ ಪ್ರವಾಹವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದು ಕೈ ಪಕ್ಷವನ್ನು ಮುಳುಗಿಸಿದೆ.

ರಾಜ್ಯದ ಬಹುತೇಕ ಎಲ್ಲ ಕಡೆ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ನೋಟು ಅಮಾನೀಕರಣ, ಮತದಾರರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂಬುದು ಫಲಿತಾಂಶದಿಂದ ಸ್ಪಷ್ಟವಾಗಿ ಗೋಚರಿಸಿದೆ.   2012ರ ವಿಧಾನಸಭೆ ಚುನಾವಣೆಯಲ್ಲಿ ಕೂದಲೆಳೆ ಅಂತರದಿಂದ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದ್ದ ಬಿಜೆಪಿ ಈ ಬಾರಿ ಎರಡನೇ ಮೂರರಷ್ಟು ಬಹುಮತದ ಮೂಲಕ ಅಧಿಕಾರಕ್ಕೆ ಏರಿದೆ.   ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಕಾರ್ಯಕರ್ತರು ಎಲ್ಲೆಡೆ ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು. ರಾಜಧಾನಿ ಡೆಹ್ರಡೂಮ್‍ನ ಕೇಂದ್ರ ಕಚೇರಿಯಲ್ಲಿ ಸಂಭ್ರಮದ ವಾತಾವರಣ ಮೂಡಿದ್ದರೆ ಕಾಂಗ್ರೆಸ್ ಕಚೇರಿಯಲ್ಲಿ ನೀರವ ಮೌನ ಆವರಿಸಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin