ಉತ್ತರ ಕರ್ನಾಟಕದಲ್ಲಿ ಕುಂಭದ್ರೋಣ ಮಳೆ, ದಕ್ಷಿಣ ಕರ್ನಾಟಕದಲ್ಲಿ ಮೋಡಕವಿದ ವಾತಾವರಣ

ಈ ಸುದ್ದಿಯನ್ನು ಶೇರ್ ಮಾಡಿ

Rain002

ಬೆಂಗಳೂರು, ಸೆ.24- ಉತ್ತರ ಕರ್ನಾಟಕ ಭಾಗದಲ್ಲಿ ಕುಂಭದ್ರೋಣ ಮಳೆಯಾಗಿ ಜನಜೀವನ ತತ್ತರಿಸುವ ಪರಿಸ್ಥಿತಿ ಉಂಟಾಗಿದ್ದರೆ, ದಕ್ಷಿಣ ಕರ್ನಾಟಕ ಭಾಗದಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ ಅತಿವೃಷ್ಟಿ ಉಂಟಾಗಿದೆ. ನಾಳೆ ವೇಳೆಗೆ ವಾಯುಭಾರ ಕುಸಿತ ದುರ್ಬಲಗೊಂಡು ಭಾರೀ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಈ ಸಂಜೆಗೆ ತಿಳಿಸಿದರು.

ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ತುಂತುರು ಇಲ್ಲವೇ ಹಗುರ ಮಳೆ ಇನ್ನೊಂದು ವಾರ ಕಾಲ ಮುಂದುವರೆಯಲಿದೆ. ಅ.9ರ ನಂತರ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹೇಳಿದರು. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ನಿನ್ನೆಯಿಂದ ಹೆಚ್ಚು ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರೆಯಲಿದೆ. ಆದರೆ, ಕಾವೇರಿ ಜಲಾನಯನ ಭಾಗದಲ್ಲಿ ಮಾತ್ರ ಮಳೆ ಆಗುತ್ತಿಲ್ಲ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin