ಉತ್ತರ ಕರ್ನಾಟಕದಲ್ಲೂ ‘ಕಾವೇರಿ’ದ ಹೋರಾಟ

ಈ ಸುದ್ದಿಯನ್ನು ಶೇರ್ ಮಾಡಿ

0c2ddad1-858e-4b79-8bb7-c0efeeba6cdd

ಬೆಂಗಳೂರು, ಸೆ.7-ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಕಳೆದ ಮಧ್ಯರಾತ್ರಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ಸರ್ಕಾರದ ನಿರ್ಧಾರ ಖಂಡಿಸಿ ಕಾವೇರಿ ಕಣಿವೆಯಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ತಾಳಿದ್ದು, ಇಂದು ಬೆಳಿಗ್ಗೆ ಮಂಡ್ಯದಲ್ಲಿ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ನಡುವೆ ಉತ್ತರ ಕರ್ನಾಟಕದ ಹಲವೆಡೆ ಕಾವೇರಿ ಹೋರಾಟ ಬೆಂಬಲಿಸಿ ಉಗ್ರ ಪ್ರತಿಭಟನೆಗಳು ನಡೆದಿವೆ. ನಿನ್ನೆ ಮಂಡ್ಯ, ಮದ್ದೂರು, ಮೈಸೂರು, ಮಳವಳ್ಳಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಕಾವು ಅಗ್ನಿ ಕುಂಡವಾಗಿ ಮಾರ್ಪಟ್ಟಿದೆ. ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ರೈತರು ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಉರುಳು ಸೇವೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರೆ ರಸ್ತೆ ತಡೆ ಮಾಡಿ ಸರ್ಕಾರದ ಧೋರಣೆಯನ್ನು ಖಂಡಿಸಿದ್ದಾರೆ. ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲವೆಂದು ಹೇಳಿ ರಾತ್ರೋ ರಾತ್ರಿ ಬಿಡುತ್ತಿರುವ ಸರ್ಕಾರದ ಇಬ್ಬಗೆ ನೀತಿಯನ್ನು ಖಂಡಿಸಿ ಭಾರೀ ಮೆರವಣಿಗೆ ರ್ಯಾಲಿ, ಪ್ರತಿಭಟನೆಗಳು ಇಂದು ಮುಂದುವರೆದವು.ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ರಾತ್ರಿಯಿಂದಲೇ ತಮಿಳುನಾಡಿಗೆ, ಕೃಷ್ಣ ರಾಜ ಸಾಗರ, ಕಬಿನಿ,ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ಮೂಲಕ 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗಿದೆ.  ಸುಪ್ರೀಂಕೋರ್ಟ್ ಆದೇಶವನ್ನೇ ಖಂಡಿಸಿ ನಿನ್ನೆ ಇಡೀ ದಿನ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಆದರೂ ಮಧ್ಯರಾತ್ರಿ ಕೆಆರ್‍ಎಸ್‍ನ 11 ಗೇಟ್‍ಗಳ ಮೂಲಕ 10 ರಿಂದ 11 ಸಾವಿರ ಕ್ಯೂಸೆಕ್ಸ್ ಹಾಗೂ ಮೈಸೂರಿನ ಎಚ್.ಡಿ.ಕೋಟೆಯ ಬೀಚನಹಳ್ಳಿ ಬಳಿಯಿರುವ ಕಬಿನಿಯಿಂದ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಇದು ಕಾವೇರಿ ಕಣಿವೆಯಲ್ಲಿ ಕಾವೇರಿದ್ದ ಪ್ರತಿಭಟನೆಯನ್ನು ಜ್ವಾಲೆಯನ್ನಾಗಿಸಿದೆ.ಇತ್ತ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿರುವುದನ್ನು ವಿರೋಧಿಸಿ, ಕನ್ನಡ ಸಂಘಟನೆಗಳ ಕಾರ್ಯಕರ್ತರು, ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣಕ್ಕೆ ಮುತ್ತಿಗೆ ಹಾಕಿದರು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು, ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಯಾವುದೇ ಕಾರಣಕ್ಕೂ ನೀರು ಬಿಡಬಾರದೆಂದು ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ತಮಿಳುನಾಡಿಗೆ ಹರಿದ ಕಾವೇರಿ ತಮಿಳುನಾಡಿಗೆ ಒಟ್ಟು 18 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲಾಗಿದೆ. ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿದ್ದರೂ ಅಧಿಕಾರಿಗಳು ಮೂರು ಸಾವಿರ ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನು ಹರಿಸಿದ್ದಾರೆ.  ಕೆಆರ್‍ಎಸ್‍ನಿಂದ 11 ಸಾವಿರ ಕ್ಯೂಸೆಕ್ಸ್, ಹಾರಂಗಿಯಿಂದ 2 ಸಾವಿರ ಹಾಗೂ ಕಬಿನಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ಸ್ , ಹೇಮಾವತಿಯಿಂದ ನೀರನ್ನು ಬಿಡಲಾಗಿದೆ. ಕೆಆರ್‍ಎಸ್‍ನ 10 ಗೇಟ್‍ಗಳ ಮೂಲಕ ಹರಿದಿರುವ ಕಾವೇರಿ ನೀರು ತಮಿಳುನಾಡಿನ ಬಿಳಿಗುಂಡ್ಲುವಿನತ್ತ ಹರಿಯುತ್ತಿದೆ.

ಸದ್ಯದ ಮಟ್ಟಿಗೆ ದಿನವೊಂದಕ್ಕೆ 15 ಸಾವಿರ ಕ್ಯೂಸೆಕ್ಸ್‍ನಂತೆ 10 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.ಹೆಚ್ಚುವರಿ ನೀರು ಯಾಕೆ?ಬಿಳಿಗೊಂಡ್ಲು ಇರುವುದು ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದಲ್ಲಿ. ಕರ್ನಾಟಕದಿಂದ ಎಷ್ಟು ನೀರು ಬಿಡಲಾಗಿದೆ ಎಂಬುದನ್ನು ಲೆಕ್ಕ ಹಾಕುವುದು ಇದೇ ಬಿಳಿಗುಂಡ್ಲುವಿನ ಬಳಿಯಲ್ಲೇ. ಕೆಆರ್‍ಎಸ್‍ನಿಂದ ಬಿಳಿಗುಂಡ್ಲುವರೆಗೆ ಸುಮಾರು 200 ಕಿಮೀ ದೂರದವರೆಗೆ ನೀರು ಹರಿದುಹೋಗಬೇಕು. ಈ ವೇಳೆ ಸಾಕಷ್ಟು ನೀರು ಬಿಸಿಲಿಗೆ ಆವಿಯಾಗುವುದು; ಭೂಮಿಗೆ ಹಿಂಗುವುದು, ಅಲ್ಲಲ್ಲಿ ಗ್ರಾಮಸ್ಥರ ಬಳಕೆಗೆ ವ್ಯಯವಾಗುತ್ತದೆ. ಹೀಗಾಗಿ, ನಿಗದಿಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡುವುದು ಅನಿವಾರ್ಯವಾಗುತ್ತದೆ.

a29fe48c-bf02-440a-a1f9-504457154702

ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶಇನ್ನು ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ರಾತ್ರಿಯಿಂದಲೇ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನು ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಇರುವ ವೆಲ್ಲೆಸಿ ಸೇತುವೆ ಬಳಿ ರೈತರು ನದಿಗಿಳಿದು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿದರು.ಈ ಮಧ್ಯೆ ಮಂಡ್ಯದಲ್ಲಿ ತಡರಾತ್ರಿಯೂ ಪ್ರತಿಭಟನೆ ನಡೆದಿದೆ. ಶ್ರೀರಂಗಪಟ್ಟಣದ ಮೇಳಾಪುರದಲ್ಲಿ ಮೈಸೂರಿಗೆ ಪೂರೈಕೆ ಆಗುತ್ತಿದ್ದ ಕಾವೇರಿ ನೀರಿನ ಮೋಟಾರ್ ಪಂಪ್‍ಗಳನ್ನ ಗ್ರಾಮಸ್ಥರು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತನೋರ್ವ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನೂ ಹಾಕಿದ್ದಾನೆ.
ಮದ್ದೂರು-ಮಳವಳ್ಳಿ ಹೆದ್ದಾರಿ ಬಂದ್

ಇದೇ ವೇಳೆ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಮಳವಳ್ಳಿ ತಾಲ್ಲೂಕಿನ ಉಪ್ಪಿನ ಕೆರೆ ಗ್ರಾಮಸ್ಥರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಹೆದ್ದಾರಿ ತಡೆ ನಡೆಸಿದ್ದಾರೆ. ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಕುಳಿತು ಗ್ರಾಮಸ್ಥರು ಧರಣಿ ನಡೆಸುತ್ತಿದ್ದು, ಈ ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮದ್ದೂರು ಸಮೀಪದಿಂದಲೇ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು. ಮತ್ತೊಂದೆಡೆ ಸ್ಥಳೀಯ ಟ್ರಾಫಿಕ್ ಪೊಲೀಸರು ಮದ್ದೂರಿನಿಂದ ಮಳವಳ್ಳಿಗೆ ತೆರಳುವ ವಾಹನಗಳನ್ನು ಬದಲಿ ಮಾರ್ಗಕ್ಕೆ ಕಳುಹಿಸಲಾಯಿತು.

f88f4fc5-51ff-4883-a246-3e05a4a030a3

ಮುಂದುವರೆದ ರಜೆ ಈ ನಿಟ್ಟಿನಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆಯೂ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಪೆÇಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಮಂಡ್ಯದ ಕೆಆರ್‍ಎಸ್‍ಗೆ ಭಾರೀ ಭದ್ರತೆ ನೀಡಲಾಗಿದ್ದು,  ಮುಂದುವರಿದಿದೆ. ಅಲ್ಲದೆ, ಕೆಆರ್‍ಎಸ್ ಮತ್ತು ಬೃಂದಾವನ ಉದ್ಯಾನವನ ಮತ್ತೆರಡು ದಿನಗಳ ಕಾಲ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.ಇತ್ತ ಹಾಸನದ ಗೊರೂರಿನ ಹೇಮಾವತಿ ಡ್ಯಾಂ ಸುತ್ತ ನಿಶೇಧ್ಯಾಜ್ನ  ಮುಂದುವರಿಸಲಾಗಿದೆ. ಹೇಮಾವತಿಯಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಅರಕಲಗೂಡು ತಾಲೂಕು ಜೆಡಿಎಸ್ ವತಿಯಿಂದ ಬೈಕ್ ರ್ಯಾಲಿ ನಡೆಸಲಾಯಿತು.ಮಾಜಿ ಶಾಸಕರ ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕಾವೇರಿದ ಗಲಾಟೆ ಹಿನ್ನೆಲೆ ನೀರಿನ ಕೊರತೆ ನಡುವೆಯೂ ತಮಿಳುನಾಡಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಹುಟ್ಟೂರು ತಲಕಾವೇರಿಯಲ್ಲಿ ಇಂದು ಕಾವೇರಿ ಬಚಾವೋ ಆಂದೋಲನ ಸಮಿತಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin