ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಯೋಧರ ಗುಂಡಿಗೆ ನಾಲ್ವರು ಉಗ್ರರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

4-Terrorist-killed--01

ಶ್ರೀನಗರ, ಏ.10-ಸಮಯ ಸಾಧಿಸಿ ಗಡಿ ಮೂಲಕ ಭಾರತದೊಳಗೆ ನುಸುಳಿ ಭಾರೀ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹುನ್ನಾರ ನಡೆಸಿದ್ದ ಪಾಕಿಸ್ತಾನದ ನಾಲ್ವರು ಭಯೋತ್ಪಾದಕರನ್ನು ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೆರಾನ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಮೂಲಕ ನಿನ್ನೆ ರಾತ್ರಿ ನುಸುಳಲು ಯತ್ನಿಸಿದರು. ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗಳಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಭಯೋತ್ಪಾದಕರ ಗುಂಪೊಂದು ಎಲ್‍ಒಸಿ ಬಳಿ ನುಸುಳಲು ಯತ್ನಿಸಿತು. ಜಾಗರೂಕರಾಗಿದ್ದ ನಮ್ಮ ಯೋಧರು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಅತಿಕ್ರಮಣ ಪ್ರಯತ್ನವನ್ನು ವಿಫಲಗೊಳಿಸಿದರು. ಉಳಿದ ಉಗ್ರರು ಕಗ್ಗತ್ತಲಲ್ಲಿ ಪರಾರಿಯಾದರು ಎಂದು ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್‍ಕೌಂಟರ್‍ನಲ್ಲಿ ಕೆಲವು ಉಗ್ರರು ಗಾಯಗೊಂಡಿರುವ ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಪರಾರಿಯಾಗಿರುವ ಇತರ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಸೇನಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಸಂದರ್ಭದಲ್ಲೇ ಭಯೋತ್ಪಾದಕರು ಭಾರತದ ಒಳಗೆ ನುಸುಳಲು ಯತ್ನಿಸಿದ್ದಾರೆ. ಯೋಧರ ಸಮಯ ಪ್ರಜ್ಞೆಯಿಂದ ಅತಿಕ್ರಮಣ ಯತ್ನ ವಿಫಲವಾಗಿದ್ದು. ಗಡಿಯಲ್ಲಿ ಹದ್ದಿನ ಕಣ್ಣಿನ ನಿಗಾ ಇಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin