‘ಉತ್ತರ ಪ್ರದೇಶಕ್ಕೆ 5 ಸಾವಿರ ಕೋಟಿ ರೂ ನೀಡಿ, ನಮ್ಮ ರಾಜ್ಯಕ್ಕೆ ಬಿಡಿಗಾಸು ನೀಡದ ಮೋದಿ’

ಈ ಸುದ್ದಿಯನ್ನು ಶೇರ್ ಮಾಡಿ

Modi-1

ನವದೆಹಲಿ, ಡಿ.25– ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಮೇಲೆ ಅನುಸರಿಸುತ್ತಿರುವ ಮಲತಾಯಿ ಧೋರಣೆ ಇನ್ನೊಂದು ನಿದರ್ಶನ ಬಯಲಾಗಿದೆ. ಉತ್ತರ ಪ್ರದೇಶಕ್ಕೆ ಹೆಚ್ಚುವರಿಯಾಗಿ 5 ಸಾವಿರ ಕೋಟಿ ರೂ. ಕೊಡುಗೆ ನೀಡಿರುವ ಪ್ರಧಾನಿ ಮೋದಿ, ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕ ರಾಜ್ಯದ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರಿಸುತ್ತಿಲ್ಲ ಎಂಬ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದೇಶಾದ್ಯಂತ ಜನ ಬ್ಯಾಂಕ್, ಎಟಿಎಂಗಳಿಂದ ಹಣ ತೆಗೆಯಲು ಪರದಾಡುತ್ತಿರುವ ಸಂದರ್ಭದಲ್ಲೇ ಮೋದಿ ಉತ್ತರ ಪ್ರದೇಶಕ್ಕೆ 5 ಸಾವಿರ ಕೋಟಿ ರೂ. ಕಳುಹಿಸಿ ಆ ರಾಜ್ಯದ ಮೇಲೆ ತಮಗಿರುವ ವಿಶೇಷ ಆಸಕ್ತಿಯನ್ನು ತೋರಿದ್ದಾರೆ. ಅಲ್ಲದೆ, ಉತ್ತರ ಪ್ರದೇಶದ ಕಣ್ಣಿಗೆ ಬೆಣ್ಣೆ, ಕರ್ನಾಟಕದ ಕಣ್ಣಿಗೆ ಸುಣ್ಣ ಹಾಕಿದ್ದಾರೆ ಎಂಬ ಆರೋಪಗಳೂ ವ್ಯಕ್ತವಾಗಿವೆ.

ಪ್ರಧಾನಿಯವರನ್ನು ಭೇಟಿ ಮಾಡಿ ರೈತರ ಬವಣೆ, ನೀರಾವರಿ ಯೋಜನೆಗಳು ಸೇರಿದಂತೆ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿ ನೆರವು ನೀಡಲು ಕೋರಿ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರಿಗೆ ಮೋದಿ ಭೇಟಿಗೆ ಅವಕಾಶ ನೀಡಲಿಲ್ಲ. ಅಲ್ಲದೆ, ಈ ಸಂಬಂಧ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತ್ಯುತ್ತರ ನೀಡಲಿಲ್ಲ. ಚುನಾವಣೆ ನಡೆಯುವ ಉತ್ತರ ಪ್ರದೇಶದಲ್ಲಿ 5 ಸಾವಿರ ಕೋಟಿ ರೂ.ಗಳ ಕೊಡುಗೆ ನೀಡಿರುವುದು ಮೋದಿಯವರ ಮಲತಾಯಿ ಧೋರಣೆಗೆ ಸಾಕ್ಷಿಯಾಗಿದೆ. ಮೋದಿಯವರ ನ್ಯಾಯದ ತಕ್ಕಡಿ ಏರುಪೇರಾಗಿದೆ ಎಂಬ ಆಕ್ರೋಶವೂ ಕರ್ನಾಟಕದ ಜನರಲ್ಲಿ ಮನೆ ಮಾಡಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin