ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಕರ್ನಾಟಕದ ಮೇಲೂ ಬೀರಲಿದೆ : ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

Jagadish-Shettar-01

ಹುಬ್ಬಳ್ಳಿ, ಮಾ.11- ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಅಭೂತ ಪೂರ್ವ ಯಶಸ್ಸು ಗಳಿಸಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಉಂಟಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.  ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‍ನ ಅಂತ್ಯ ಪ್ರಾರಂಭವಾಗಲಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಮ್ಮ ಪಕ್ಷ ಜಯಗಳಿಸಲಿದೆ.

ಉತ್ತರಪ್ರದೇಶ, ಉತ್ತರಾಖಂಡ್ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಯಶಸ್ಸು ಗಳಿಸಿದ್ದು, ಅಧಿಕಾರದ ಗದ್ದುಗೆಯನ್ನು ಏರಿದೆ. ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದರು.  ಪಂಜಾಬ್‍ನಲ್ಲಿ ಆಡಳಿತ ವಿರೋಧಿ ಅಲೆ ಕಾರಣವಾಗಿದ್ದು, ಇದರಿಂದ ನಮ್ಮ ಪಕ್ಷಕ್ಕೆ ಸೋಲುಂಟಾಗಿದೆ ಎಂದು ಒಪ್ಪಿಕೊಂಡರು. ಆದರೂ ಜನತೆ ತೀರ್ಮಾನಕ್ಕೆ ತಲೆಬಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.  ಪ್ರಧಾನಿ ಮೋದಿಯವರು ಜಾರಿಗೆ ತಂದ ಗರಿಷ್ಠ ಮುಖಬೆಲೆಯ ನೋಟು ಅಮಾನೀಕರಣ ವಿರುದ್ಧ ಕಾಂಗ್ರೆಸ್ ಪಕ್ಷ ಅಪಪ್ರಚಾರ ಮಾಡಿದ್ದರೂ ಜನ ಮೋದಿಯವರ ಕೈ ಹಿಡಿದಿದ್ದಾರೆ ಎಂದು ಶ್ಲಾಘಿಸಿದರು.  ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ದೊರೆತಿರುವ ಪ್ರಚಂಡ ಜಯ ತಂದುಕೊಟ್ಟ ಜನರಿಗೆ ಕೃತಜ್ಞತೆ ಸಲ್ಲಿಸಿದರು.  ವಿರೋಧ ಪಕ್ಷಗಳು ಮೋದಿಯವರನ್ನು ಮಣಿಸಲು ಮಾಡಿದ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin