ಉತ್ತರ ಪ್ರದೇಶದಲ್ಲಿ ಪೌರ ಚುನಾವಣೆಯಲ್ಲಿ ಬಿಜೆಪಿಗೆ 14 ಮೇಯರ್ ಸ್ಥಾನಗಳು

ಈ ಸುದ್ದಿಯನ್ನು ಶೇರ್ ಮಾಡಿ

UP-Election-01

ಲಖ್ನೋ,ಡಿ.1- ಉತ್ತರ ಪ್ರದೇಶದಲ್ಲಿ ನಡೆದ ಪೌರ ಚುನಾವಣೆಗಳ ಫಲಿತಾಂಶ ಇಂದು ಪ್ರಕಟಗೊಂಡಿದ್ದು , 16 ಮೇಯರ್ ಸ್ಥಾನಗಳಲ್ಲಿ 14ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಪರವಾಗಿ ಮತದಾರರ ಒಲವು ಇರುವುದು ಸ್ಪಷ್ಟವಾಗಿದೆ. ಲಖ್ನೋ, ಅಲಹಬಾದ್, ಅಲಿಘಡ, ವಾರಣಾಸಿ, ಘಾಜಿಯಾಬಾದ್, ಗೋರಖ್‍ಪುರ್, ಫರಿದಾಬಾದ್, ಮೊರದಾಬಾದ್ ಸೇರಿದಂತೆ 14 ನಗರ ಪಾಲಿಕೆಗಳ ಮೇಯರ್ ಸ್ಥಾನ ಬಿಜೆಪಿಗೆ ಒಲಿದಿದೆ.  ಮಾಜಿ ಮುಖ್ಯಮಂತ್ರಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಝಾನ್ಸಿ ಮತ್ತು ಆಗ್ರ ನಗರಸಭೆಗಳಲ್ಲಿ ಪ್ರಾಬಲ್ಯ ಸಾಧಿಸಿದೆ. ಉತ್ತರಪ್ರದೇಶದ ಒಟ್ಟು 652 ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು , ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin