ಉದ್ದೇಶಿತ ಕಾರ್ಯಕ್ಕೆ ಬಳಕೆಯಾಗದ ಭೂಮಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ
ತುಮಕೂರು, ಆ.25- ಜಿಲ್ಲೆಯ ಕುಣಿಗಲ್ ತಾಲೂಕು ಹುಲಿಯೂರು ದುರ್ಗ ಹೋಬಳಿ ಹೊನ್ನಮಾಚನಹಳ್ಳಿ ಗ್ರಾಮದ ಸರ್ವೆ ನಂ.23ರಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಗೆ ನೀಡಿರುವ ಭೂಮಿ ಗುತ್ತಿಗೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಪಂಚಾಯತ್ ಕಾವಲು ಸಮಿತಿ ನೇತೃತ್ವದಲ್ಲಿ ಹೊನ್ನಮಾಚನಹಳ್ಳಿ ಜನತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಗ್ರಾಮದ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಗರಕ್ಕೆ ಹೋರಾಟ 400ಕ್ಕೂ ಹೆಚ್ಚು ಜನರು ಜಿಲ್ಲಾಧಿಕಾರಿ ಕಚೇರಿ ತಲುಪಿ ಸರ್ಕಾರ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಗೆ ನೀಡಿರುವ 50 ಎಕರೆ ಭೂಮಿಯ ಗುತ್ತಿಗೆ ರದ್ದುಪಡಿಸಿ ಬೇರೆ ಸರ್ಕಾರಿ ಶಾಲಾ-ಕಾಲೇಜುಗಳನ್ನು ತೆರೆಯಲು ಭೂಮಿ ಮೀಸಲಿಡುವಂತೆ ಒತ್ತಾಯಿಸಿ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಎ.ಜಯರಾಮಯ್ಯ ಮಾತನಾಡಿ, ನಿಗದಿತ ಉದ್ದೇಶಕ್ಕೆ ನೀಡಿದ್ದ ಭೂಮಿ ಸದರಿ ಉದ್ದೇಶಕ್ಕೆ ಬಳಕೆಯಾಗದಿದ್ದರೆ ಯಾವುದೇ ಪರಿಹಾರ ನೀಡದೆ ಸರ್ಕಾರ ವಶಪಡಿಸಿಕೊಳ್ಳಲು ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ವಿಧೇಯಕ-2014ರಲ್ಲಿ ಅವಕಾಶವಿದೆ. ಆದ್ದರಿಂದ ಸರ್ಕಾರ ಕೂಡಲೇ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಗೆ ನೀಡಿರುವ ಭೂಮಿಯ ಗುತ್ತಿಗೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಒಂದು ತಿಂಗಳೊಳಗೆ ಸ್ಪಷ್ಟ ನಿಲುವು ತಾಳದಿದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟ ನಡಸುವುದಾಗಿ ಎಚ್ಚರಿಸಿದರು.ಸಮಿತಿ ಉಪಾಧ್ಯಕ್ಷ ಕೊಡವತ್ತಿ ಆರ್.ರಾಜಣ್ಣ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
► Follow us on – Facebook / Twitter / Google+