ಉದ್ಯಮಿಗಳು, ಸಿನಿಮಾ ನಟರು, ಕ್ರೀಡಾಪಟುಗಳು ಸೇರಿ ಹಲವರಿಗೆ 300 ಕೋಟಿ ವಂಚನೆ, ನಾಲ್ವರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

300-cr

ಬೆಂಗಳೂರು, ಮಾ.11- ನಗರದ ಚಿಟ್‍ಫಂಡ್ ಕಂಪೆನಿಯೊಂದು 300 ಕೋಟಿ ರೂ.ಗೂ ಹೆಚ್ಚಿನ ವಂಚನೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ರಾಘವೇಂದ್ರ, ಸುರೇಶ್, ನಾಗರಾಜ್ ಮತ್ತು ನರಸಿಂಹಮೂರ್ತಿ ಬಂಧಿತ ಆರೋಪಿಗಳು. ಹಲವು ಉದ್ಯಮಿಗಳು, ಸಿನಿಮಾ ನಟರು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ವಿಕ್ರಂ ಚಿಟ್‍ಫಂಡ್ ಎಂಬ ಕಂಪೆನಿಯಲ್ಲಿ ಹಣ ತೊಡಗಿಸಿದ್ದರು ಎನ್ನಲಾಗಿದೆ. ಈ ಕಂಪೆನಿಯು ಒಬ್ಬೊಬ್ಬರಿಂದ ಕೋಟ್ಯಂತರ ಹಣ ಪಡೆದು ವಂಚಿಸಿದೆ ಎಂದು ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ, ಶೇರು ಮಾರುಕಟ್ಟೆಯಲ್ಲಿ ಈ ಕಂಪೆನಿ 300 ಕೋಟಿ ರೂ.ಗೂ ಹೆಚ್ಚಿನ ವಂಚನೆ ಮಾಡಿರುವ ಮಾಹಿತಿ ಆಧರಿಸಿ ತನಿಖೆ ಕೈಗೊಂಡು ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಯಶವಂತಪುರದ ಎಪಿಎಂಸಿ ಯಾರ್ಡ್‍ನಲ್ಲೂ ಮೋಸ ಮಾಡಿರುವುದು ಬೆಳಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ.

Facebook Comments

Sri Raghav

Admin