ಉದ್ಯಾನನಗರಿಯಲ್ಲಿ ಅಪರಾಧ ಪತ್ತೆಗೆ ಬಂದಿವೆ ಸೂಪರ್‍ಸಾನಿಕ್ ಕ್ಯಾಮರಾಗಳು..!

ಈ ಸುದ್ದಿಯನ್ನು ಶೇರ್ ಮಾಡಿ

super-sanic

ಬೆಂಗಳೂರು, ಜ.28-ಉದ್ಯಾನನಗರಿಯಲ್ಲಿ ಹೆಚ್ಚುತ್ತಿರುವ ಗಂಭೀರ ಅಪರಾಧ ಪ್ರಕರಣಗಳು ಮತ್ತು ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯನ್ನು ಜಾರಿಗೊಳಿಸುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಿದೆ.  ನಗರದ ಪ್ರಮುಖ ಮತ್ತು ಅತ್ಯಂತ ಸೂಕ್ಷ್ಮ ಸ್ಥಳಗಳಲ್ಲಿ ಅತ್ಯಾಧುನಿಕ ಕ್ಷಿಪ್ರ ಗೋಳ (ಸಫೆಸ್ಟಿಕೇಟೆಡ್ ಸ್ಪೀಡ್ ಡೋಮ್-ಎಸ್‍ಎಸ್‍ಡಿ) ಕ್ಯಾಮೆರಾಗಳನ್ನು ಹಾಗೂ ಅತ್ಯಂತ ಸುಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್‍ಮಾಪಕ ಕ್ಯಾಮೆರಾಗಳನ್ನು ಅಳವಡಿಸಲಿದೆ.
ನಗರದ ಬಹುತೇಕ ಕಡೆ ಈಗಾಗಲೇ ಸಿಸಿ ಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದು, ಆ ಸ್ಥಳಗಳಲ್ಲಿ ಹೊಸ ಸ್ಮಾರ್ಟ್ ವಿಡಿಯೋ ಸಾಫ್ಟ್‍ವೇರ್ ಅನಾಲಿಟಿಕ್ ತಂತ್ರಜ್ಞಾನವನ್ನು ಬಳಸಿ ಅಪರಾಗಳು ಮತ್ತು ಕಾನೂನು ಉಲ್ಲಂಘಿಸುವವರನ್ನು ಪತ್ತೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಹಾನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೊಸ ವರ್ಷದ ಸಂದರ್ಭದಲ್ಲಿ ನಡೆದ ಸರಣಿ ಲೈಂಗಿಕ ಕಿರುಕುಳದಿಂದ ಬೆಂಗಳೂರಿನ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿರುವ ಹಿನ್ನೆಲೆಯಲ್ಲಿ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ಪತ್ತೆಗೆ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಚಾರ ಒತ್ತಡ ವಿಪರೀತವಾಗುತ್ತಿದೆ. ಜೊತೆಗೆ ಅಪಘಾತಗಳು, ಹಿಟ್ ಅಂಡ್ ರನ್ ಪ್ರಕರಣಗಳು ಕೂಡ ವರದಿಯಾಗುತ್ತಿವೆ.

ಕಾನೂನು ಉಲ್ಲಂಘಿಸುವವರನ್ನು ಸಿಸಿ ಟಿವಿ ಕ್ಯಾಮೆರಾದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಪಘಾತ ನಡೆಯುವ ಸಂದರ್ಭದಲ್ಲಿ ವಾಹನಗಳ ಸಂಖ್ಯೆಯನ್ನು ನಿಖರವಾಗಿ ದಾಖಲಿಸುವ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಮಹತ್ವಾಕಾಂಕ್ಷೆ ಯೋಜನೆ ಕುರಿತ ಜೀರೋ ಟಾಲರೆನ್ಸ್ ಪ್ರಾಜೆಕ್ಟ್ ಪ್ರಾತ್ಯಕ್ಷಿಕೆ ಮತ್ತು ಪವರ್ ಪಾಯಿಂಟ್ ಪ್ರಸ್ತುತಿಯನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತು ಉನ್ನತ ಪೊಲೀಸ್ ಅಕಾರಿಗಳು ವೀಕ್ಷಿಸಿ ಪ್ರಶಂಸಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin