ಉಪಮೇಯರ್ ಚುನಾವಣೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

ಈ ಸುದ್ದಿಯನ್ನು ಶೇರ್ ಮಾಡಿ

bjp
ಬೆಂಗಳೂರು, ಸೆ.28- ಸಂಸದ ಪಿ.ಸಿ. ಮೋಹನ್ ಹಾಗೂ ರಾಜ್ಯ ಸಭಾ ಸದಸ್ಯ ರಾಜು ಚಂದ್ರಶೇಖರ್ ಅವರಿಗೆ ಉಪಮೇಯರ್ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದ ಅಕಾರಿಗಳ ಧೋರಣೆ ಖಂಡಿಸಿ ಬಿಜೆಪಿ ಸದಸ್ಯರು ಉಪಮೇಯರ್ ಚುನಾವಣೆಯನ್ನೇ ಬಹಿಷ್ಕರಿಸಿ ಹೊರ ನಡೆದರು. ಮಾಜಿ ಕಾನೂನು ಸಚಿವ ಸುರೇಶ್‌ಕುಮಾರ್ ಹಾಗೂ  ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಚುನಾವಣೆ ಬಹಿಷ್ಕರಿಸಿ ಹೊರಬಂದು ಕೌನ್ಸಿಲ್ ಕಟ್ಟಡದ ಬಳಿ ದಿಢೀರ್ ಪ್ರತಿಭಟನೆ ನಡೆಸಿದರು. ಈ ವೇಳೆ ಸುರೇಶ್‌ಕುಮಾರ್ ಮಾತನಾಡಿ, ಪ್ರಾದೇಶಿಕ ಆಯುಕ್ತೆ ಜಯಂತಿ ಮತ್ತಿತರ ಅಕಾರಿಗಳು ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನೀರಿನ ಕುರಿತು ಮುಂದಿನ ನಡೆ ಬಗ್ಗೆ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಪಿ.ಸಿ.ಮೋಹನ್ ಹಾಗೂ ರಾಜು ಚಂದ್ರಶೇಖರ್ ಪಾಲ್ಗೊಂಡಿದ್ದರು. ಹಾಗಾಗಿ ಮೇಯರ್ ಚುನಾವಣೆಗೆ ತಡವಾಗಿ ಬಂದಿದ್ದಾರೆ.
ಮೇಯರ್ ಚುನಾವಣೆಗೆ ಅವಕಾಶ ನೀಡಿಲ್ಲ. ಆದರೆ ಉಪಮೇಯರ್ ಚುನಾವಣೆಗೂ ಅವಕಾಶ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿ.ಸಿ.ಮೋಹನ್ ಹಾಗೂ ರಾಜು ಚಂದ್ರಶೇಖರ್ ಅವರ ಮತದಾನ ಹಕ್ಕನ್ನು ಅಕಾರಿಗಳು ಮೊಟಕುಗೊಳಿಸಿದ್ದಾರೆ. ಇದನ್ನು ಖಂಡಿಸಿ ಉಪಮೇಯರ್ ಚುನಾವಣೆಯನ್ನು ಬಹಿಷ್ಕರಿಸಿದ್ದೇವೆ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin