ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಗೆ ನಿತೀಶ್ ಬೆಂಬಲ

ಈ ಸುದ್ದಿಯನ್ನು ಶೇರ್ ಮಾಡಿ

Nirish-Kumar--014

ನವದೆಹಲಿ, ಜು.12- ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿ ಕಾಂಗ್ರೆಸ್‍ನ ಗೋಪಾಲಕೃಷ್ಣ ಗಾಂಧಿಯವರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್‍ಕುಮಾರ್ ನೇತೃತ್ವದ ಜೆಡಿಯು ಬೆಂಬಲ ಸೂಚಿಸಿದೆ.  ದೂರವಾಣಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಯವರೊಂದಿಗೆ ಸಂಭಾಷಣೆ ನಡೆಸಿ ನಿತೀಶ್‍ಕುಮಾರ್, ನಂತರ ಮಹಾತ್ಮಗಾಂಧೀಜಿಯವರ ಮೊಮ್ಮಗ ಗೋಪಾಲಕೃಷ್ಣಗಾಂಧಿಯವರನ್ನು ಬೆಂಬಲಿಸುವ ಭರವಸೆ ನೀಡಿದ್ದು, ಇದರಿಂದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಯು ಬೆಂಬಲ ಯಾರಿಗೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದಲ್ಲಿ ಉಪರಾಷ್ಟ್ರಪತಿ ಆಯ್ಕೆ ಸಂಬಂಧ 18 ವಿವಿಧ ಪಕ್ಷಗಳ ಮುಖಂಡರು ನಿನ್ನೆ ನಡೆಸಿದ ಸಭೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ನಿತೀಶ್‍ಕುಮಾರ್ ಹಾಜರಾಗಿರಲಿಲ್ಲ.

ಜೆಡಿಯು ಪರವಾಗಿ ಶರದ್ ಯಾದವ್ ಮಾತ್ರ ಉಪಸ್ಥಿತರಿದ್ದರು. ನಂತರ ರಾಹುಲ್‍ಗಾಂಧಿಯವರು ಸ್ವತಃ ನಿತೀಶ್‍ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಇದಾದ ಒಂದು ಗಂಟೆಯ ಬಳಿಕ ಸ್ವತಃ ನಿತೀಶ್‍ಕುಮಾರ್ ಕರೆ ಮಾಡಿ ರಾಹುಲ್‍ಗಾಂಧಿಯವರೊಂದಿಗೆ ಮಾತನಾಡಿ, ಬೆಂಬಲ ಸೂಚಿಸುವುದಾಗಿ ಪ್ರಕಟಿಸಿದ್ದಾರೆ.
ಹೀಗಾಗಿ ಪ್ರತಿಪಕ್ಷಗಳ ಅಭ್ಯರ್ಥಿಗೆ ಹೆಚ್ಚಿನ ಬೆಂಬಲ ಸಿಕ್ಕಂತಾಗಿದೆ.

ಬಿಹಾರದ ರಾಜ್ಯಪಾಲರಾಗಿರುವ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ನಿತೀಶ್‍ಕುಮಾರ್ ಬೆಂಬಲ ವ್ಯಕ್ತಪಡಿಸಿದಾಗ ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿತ್ತು. ಆಗ ಬಿಹಾರದ ರಾಜ್ಯಪಾಲರಾಗಿದ್ದಾರೆ ಎಂಬ ಕಾರಣಕ್ಕೆ ಬೆಂಬಲ ನೀಡಿರುವುದಾಗಿ ನಿತೀಶ್ ತಿಳಿಸಿದ್ದರು.  ಮಾತುಕತೆ ವೇಳೆ ರಾಹುಲ್‍ಗಾಂಧಿಯವರೊಂದಿಗೆ ನಿತೀಶ್‍ಕುಮಾರ್ ಬಿಹಾರದ ರಾಜಕೀಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin