ಎಂಜಿಯರ್‍ಗಳಿಗೆ ಉತ್ತಮ ಭವಿಷ್ಯವಿದೆ : ಸದಾನಂದಗೌಡ

ಈ ಸುದ್ದಿಯನ್ನು ಶೇರ್ ಮಾಡಿ

sadananda--gowda

 

ಕೆಆರ್ ಪುರ, ಆ.19-ಎಂಜಿನಿಯರಿಂಗ್ ವಿದ್ಯಾಭ್ಯಾಸ ವಿದ್ಯಾರ್ಥಿಗಳ ಪಾಲಿಗೆ ಭವಿಷ್ಯ ಸೃಷ್ಟಿಸುವ ಒಂದು ಮೈಲಿಗಲ್ಲು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ತಿಳಿಸಿದರು.ಅಯ್ಯಪ್ಪ ನಗರದ ಎಸ್‍ಸಿಎ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಂಜಿನಿಯರಿಂಗ್ ತೆಗೆದುಕೊಂಡ ವಿದ್ಯಾರ್ಥಿಗಳು ಆರಂಭದಲ್ಲಿ ಎಷ್ಟು ಉತ್ಸುಕರಾಗಿರುತ್ತೀರೋ ವಿದ್ಯಾಭ್ಯಾಸ ಪೂರ್ಣಗೊಳ್ಳುವವರೆಗೂ ಅಷ್ಟೇ ಉತ್ಸುಕರಾಗಿರಬೇಕು ಎಂದು ಸಲಹೆ ನೀಡಿದರು.
ವಿದ್ಯಾಭ್ಯಾಸದ ಜತೆಗೆ ಸಾಂಸ್ಕೃತಿ , ಕ್ರೀಡಾ ಚಟುವಟಿಕೆ ಸೇರಿದಂತೆ ಇತರ ಚಟುವಟಿಕೆ ನಡೆಯಲು ಎಸ್‍ಸಿಎ ಕಾಲೇಜಿನಲ್ಲಿ ಉತ್ತಮ ವಾತಾವರಣವಿದೆ ಎಂದು ಹೇಳಿದರು.
ಕಾಲೇಜು ವಿದ್ಯಾರ್ಥಿ ಜೀವನದಲ್ಲಿ ಇತರ ಚಟುವಟಿಕೆಗಳ ಜೊತೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.ಭಾರತದ ಎಂಜಿನಿಯರ್‍ಗಳಿಗೆ ಉತ್ತಮ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ವಿದೇಶಿ ಕಂಪೆನಿಗಳನ್ನು ಭಾರತಕ್ಕೆ ತರಲಾಗಿದೆ. ಇದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ತೋರಿಸಿದರೆ ಭಾರತದ ಗೌರವ ಇನ್ನಷ್ಟು ಹೆಚ್ಚುತ್ತದೆ ಎಂದು ಹೇಳಿದರು.
ಪುಂಡಾಟಿಕೆಯಲ್ಲಿ ತೊಡಗಳು ಯಾರೇ ಪ್ರೇರೇಪಿಸಿದರೂ ಅವರ ಸಹವಾಸವೇ ಬಿಟ್ಟುಬಿಡಿ. ಕಾಲೇಜಿನ ಕಾರ್ಯದರ್ಶಿ ಡಿ.ಟಿ.ಶ್ರೀನಿವಾಸ್‍ರವರ ನೀಡುವ ಉಪದೇಶಗಳನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು.ಪಾಲಿಕೆ ಸದಸ್ಯೆ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶ ಮೈಗೂಡಿಸಿಕೊಂಡು ಮುನ್ನಡೆಯಿರಿ ಎಂದರು.ಕಾಲೇಜಿನ ಅಧ್ಯಕ್ಷೆ ಮಂಜುಳಾ ಕೃಷ್ಣಪ್ಪ, ಕಾರ್ಯದರ್ಶಿ ಡಿ.ಟಿ.ಶ್ರೀನಿವಾಸ್, ಅನುಪಮಾ, ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ್, ಪ್ರಾಂಶುಪಾಲ ವಿ.ಆರ್. ಮಂಜುನಾಥ್, ಗೋಪಾಲ್, ರವಿಕುಮಾರ್, ಲೋಕಿ ಮತ್ತಿತರರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin