ಎಂ.ಬಿ.ಪಾಟೀಲರಿಗೆ ವಿನಾಶ ಕಾಲೇ ವಿಪರೀತ ಬುದ್ಧಿ : ಬಿಎಸ್‍ವೈ ಕಿಡಿ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01

ಬಾಗಲಕೋಟೆ, ಸೆ.13- ಸಚಿವ ಎಂ.ಬಿ.ಪಾಟೀಲ್ ಅವರು ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಬಾಗಲಕೋಟೆಗೆ ಎರಡು ದಿನಗಳ ಬಿಜೆಪಿ ಕಾರ್ಯಾಗಾರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧಗಂಗಾ ಶ್ರೀಗಳು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲ ನೀಡಿದ್ದಾರೆ ಎಂದು ಎಂ.ಬಿ.ಪಾಟೀಲ್ ಹೇಳಿಕೆ ನೀಡಿರುವುದು ಅವರ ಬಾಲಿಶತನದ ಪ್ರದರ್ಶನವಾಗಿದೆ. ಶ್ರೀಗಳ ಬಗ್ಗೆ ಸಚಿವರು ಮಾತನಾಡದೆ ಮೌನವಾಗಿರುವುದೇ ಒಳ್ಳೆಯದು ಎಂದು ಹರಿಹಾಯ್ದರು.

ತಪ್ಪಿನ ಪ್ರಾಯಶ್ಚಿತಕ್ಕಾಗಿ ಎಂ.ಬಿ.ಪಾಟೀಲ್ ಕೂಡಲಸಂಗಮದಲ್ಲಿ ಧ್ಯಾನಕ್ಕೆ ಕುಳಿತಿದ್ದಾರೆ ಎಂದು ಕಾಣುತ್ತದೆ ಎಂದು ವ್ಯಂಗ್ಯವಾಡಿದರು.  ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಹಗರಣಗಳ ಬಗ್ಗೆ ನಾಲ್ಕಾರು ದಿನಗಳಲ್ಲಿ ಚಾರ್ಜ್‍ಶೀಟ್ ಬಿಡುಗಡೆ ಮಾಡುವುದಾಗಿ ಹೇಳಿದರು. ಮುಖ್ಯಮಂತ್ರಿಗಳ ಬಂಧುಗಳು, ಶಾಸಕರು, ಕೆಲ ಸಚಿವರ ಭ್ರಷ್ಟಾಚಾರ ಬಯಲು ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

Facebook Comments

Sri Raghav

Admin