ಎಎಪಿ ಮುಖಂಡ ಕುಮಾರ್ ವಿಶ್ವಾಸ್ ಬಿಜೆಪಿಗೆ..?

ಈ ಸುದ್ದಿಯನ್ನು ಶೇರ್ ಮಾಡಿ

Kumar-Vishjwas

ನವದೆಹಲಿ, ಜ.18- ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್‍ವಿಶ್ವಾಸ್ ಬಿಜೆಪಿ ಸೇರಲು ಮುಂದಾಗಿದ್ದಾರೆ. ಈ ಬಗ್ಗೆ ಕೇಸರಿ ಪಕ್ಷದ ನಾಯಕರ ಜತೆ ಕುಮಾರ್ ವಿಶ್ವಾಸ್ ಮಾತುಕತೆ ನಡೆಸಿದ್ದಾರೆ. ಉತ್ತರ ಪ್ರದೇಶದ ಚುನಾವಣಾ ಕಣಕ್ಕಿಳಿಯಬೇಕು ಎಂಬುದು ಇವರ ಉದ್ದೇಶವಾಗಿದೆ. ಶಾಹಿಬ್‍ಬಾದ್ ಕ್ಷೇತ್ರದಿಂದ ಸ್ಪರ್ಧಿಸಲು ಕುಮಾರ್ ವಿಶ್ವಾಸ್ ಬಿಜೆಪಿಯಿಂದ ಟಿಕೆಟ್ ಕೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಎರಡು ದಿನದೊಳಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ. ಆದರೆ, ಗೃಹ ಸಚಿವ ರಾಜನಾಥ್‍ಸಿಂಗ್ ಅವರ ಪುತ್ರ ಹಾಗೂ ಉತ್ತರ ಪ್ರದೇಶ ಬಿಜೆಪಿ ಘಟಕದ ಪ್ರಧಾನಕಾರ್ಯದರ್ಶಿ ಪಂಕಜ್‍ಸಿಂಗ್ ಕೂಡ ಅದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.

ಸುಮಾರು ಒಂದು ದಶಕದಿಂದ ಯುಪಿ ರಾಜಕಾರಣದಲ್ಲಿ ಸಕ್ರಿಯವಾಗಿರುವ ಪಂಕಜ್‍ಸಿಂಗ್ ರಾಜಕೀಯ ಭವಿಷ್ಯದ ಬಗ್ಗೆ ಕೂಡ ಕಾಣಜಿ ವಹಿಸುವುದಾಗಿ ಬಿಜೆಪಿ ಅಭಯ ನೀಡಿದೆ. ಆಗಾಗಿ ಅವರನ್ನು ನೋಯಿಡಾ ಅಥವಾ ಚಂದೌಲಿ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಬಗ್ಗೆ ಚಿಂತನೆ ಕೂಡ ನಡೆದಿದೆ. ಇನ್ನು ಎಎಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಕಾರಣಕ್ಕೆ ಕುಮಾರ್ ವಿಶ್ವಾಸ್ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin