ಎಚ್.ಡಿ.ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ : ಕೋಡಿ ಶ್ರೀಗಳ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಜು.3- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹಾರ್ನಳ್ಳಿ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಯವರು ಹಾಸನದಲ್ಲಿ ಕಳೆದ ಶನಿವಾರ ಭವಿಷ್ಯ ನುಡಿದಿದ್ದಾರೆ. ತಾಳೆಗರಿ ಆಧಾರಿತ ಭವಿಷ್ಯ ನುಡಿಯುವ ಶ್ರೀಗಳು ಬಿತ್ತಿದ ಬೆಳಸು ಪರರು ಕೊಯ್ದಾರು ಎಂದು ಹೇಳಿದ್ದಾರೆ.   ಬಿತ್ತಿದ ಬೀಜ ಬೆಳೆದು ಬಂದ ಪೈರು ಅಂದರೆ ಮುಂದಿನ 2018ರ ವಿಧಾನಸಭೆ ಚುನಾವಣೆ ಫಲಿತಾಂಶದ ಫಲವನ್ನು ಮತ್ಯಾರೋ ಉಣ್ಣುತ್ತಾರೆ ಎಂದು ಮಾರ್ಮಿಕವಾಗಿ ಹೇಳುವ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ಸೂಚಿಸಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿಗೆ ಬಹುಮತ ಬರುವ ಸಾಧ್ಯತೆ ಕಡಿಮೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಿಂಚಲಿದ್ದಾರೆ ಎಂದು ಅರ್ಥೈಸಬಹುದಾಗಿದೆ. ರಾಜ್ಯ ಮತ್ತು ರಾಷ್ಟ್ರದಲ್ಲಿ ಅಸ್ಥಿರತೆ ಪರಿಸ್ಥಿತಿ ಇಲ್ಲ. ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಜಯಕ್ಕಾಗಿ ಎಷ್ಟೇ ದುಡಿದರೂ ಅದರ ಲಾಭವನ್ನು ಅವರು ಪಡೆದುಕೊಳ್ಳುವ ಸಾಧ್ಯತೆ ಕಡಿಮೆ ಎಂದು ಶ್ರೀಗಳು ನುಡಿದಿದ್ದಾರೆ. ಬೇಕಾದ ಜಾಗದಲ್ಲಿ ಮಳೆ ಬಾರದೆ ಮಳೆಯ ತೀವ್ರ ಅವಶ್ಯಕತೆ ಇಲ್ಲದ ಪ್ರದೇಶದಲ್ಲಿ ಮಳೆ ಬರಲಿದೆ. ಹೀಗಾಗಿ ಅನ್ನ, ನೀರಿಗಾಗಿ ಪರದಾಡಬೇಕಾದ ದಿನಗಳು ಬರಬಹುದೆಂದು ಸ್ವಾಮೀಗಳು ಭವಿಷ್ಯ ನುಡಿದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳ ಲೆಕ್ಕಾಚಾರ ಉಲ್ಟಾ ಹೊಡೆಯಲಿದೆ ಎನ್ನುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿಗೆ ಶಾಕ್ ಆಗುವ ಭವಿಷ್ಯವನ್ನ್ನು ಕೋಡಿ ಶ್ರೀಗಳು ನುಡಿದಿದ್ದಾರೆ.

ಈ ಪಕ್ಷಗಳ ಯಾವ ಕಾರ್ಯತಂತ್ರವೂ ಫಲಿಸುವ ಸಾಧ್ಯತೆ ಇಲ್ಲ. ಪ್ರಮುಖ ಪಕ್ಷದ ರಾಜಕೀಯ ನಾಯಕ ಮುಖ್ಯಮಂತ್ರಿಯಾಗುವ ಸಾಧ್ಯತೆ ಕೂಡ ಇಲ್ಲ. ಅನಿರೀಕ್ಷಿತ ವ್ಯಕ್ತಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಪ್ರಮುಖ ಪಕ್ಷದ ರಾಯಕೀಯ ನಾಯಕರೆಂದರೆ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಎಂದು ಅರ್ಥೈಸಿಕೊಂಡರೆ ಅನಿರೀಕ್ಷಿತ ವ್ಯಕ್ತಿ ಸಿಎಂ ಆಗುತ್ತಾರೆ ಎಂದರೆ ಅದು ಎಚ್.ಡಿ.ಕುಮಾರಸ್ವಾಮಿ ಎಂದು ವ್ಯಾಖ್ಯಾನಿಸಲಾಗಿದೆ.  ಮುಂದಿನ ಚುನಾವಣೆವರೆಗೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಅವರ ಕುರ್ಚಿ ಭದ್ರವಾಗಿರುತ್ತದೆ ಎಂದು ಹೇಳಿದ್ದಾರೆ.  ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ ಭವಿಷ್ಯ ನುಡಿದಿದ್ದ ಶ್ರೀಗಳು, ಕಾರ್ಯಾಂಗ ವ್ಯವಸ್ಥೆ ಹದಗೆಡುವ ಬಗ್ಗೆ ಸೂಚನೆ ನೀಡಿದ್ದರು. ಅದೇ ರೀತಿ ಕಾವೇರಿ ಸಮಸ್ಯೆ ರಾಜ್ಯವನ್ನು ತೀವ್ರವಾಗಿ ಕಾಡಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin