ಎಣ್ಣೆ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿಕೊಂಡ ಭೂಪ..!

ಈ ಸುದ್ದಿಯನ್ನು ಶೇರ್ ಮಾಡಿ
Fire-01
ಸಾಂಧರ್ಭಿಕ ಚಿತ್ರ

ಮೈಸೂರು, ಡಿ.15- ಮನುಷ್ಯನಿಗೆ ಎಣ್ಣೆ ಮತ್ತು ನೆತ್ತಿಗೇರಿದರೆ ಏನು ಮಾತಾಡ್ತಾನೆ ಎನ್ನುವ ಅರಿವೇ ಇರುವುದಿಲ್ಲ ಎನ್ನುತ್ತಾರೆ. ಅದು ಎಷ್ಟು ನಿಜವೋ… ಸುಳ್ಳೋ… ಗೊತ್ತಿಲ್ಲ. ಇಲ್ಲೊಬ್ಬ ಭೂಪ ತಾನು ವಾಸವಿದ್ದ ಮನೆಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ತಿಲಕ್‍ನಗರ ವಾಸಿ ಮಹದೇವ (32) ಎಂಬ ವ್ಯಕ್ತಿ ಕಳೆದ ರಾತ್ರಿ ಕಂಠಪೂರ್ತಿ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿ ದೇವರ ಕೋಣೆಯಲ್ಲಿದ್ದ ದೀಪವನ್ನು ಮಂಚದ ಮೇಲೆ ಎಸೆದಿದ್ದಾರೆ. ಇದರಲ್ಲಿ ಮಂಚದ ಮೇಲಿದ್ದ ಬಟ್ಟೆ, ಹಾಸಿಗೆಗೆ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿವೆ. ಈತನ ಗಲಾಟೆ ಕೇಳಿ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ತಿಲಕ್‍ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದಾಗ ಅವರಿಗೂ ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೂ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಆತನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin