ಎತ್ತಿನಹೊಳೆ ಯೋಜನೆಗೆ 13ಸಾವಿರ ಕೋಟಿ : ಸುಧಾಕರ್ ಮೆಚ್ಚುಗೆ

ಈ ಸುದ್ದಿಯನ್ನು ಶೇರ್ ಮಾಡಿ

ettina-hole

ಚಿಕ್ಕಬಳ್ಳಾಪುರ, ಸೆ.15- ಶಾಶ್ವತ ನೀರಾವರಿ ಯೋಜನೆಗೆ ಈ ಹಿಂದಿನ ಯಾವುದೇ ಸರ್ಕಾರ ಒಂದು ಪೈಸೆ ಸಹ ನೀಡಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎತ್ತಿನಹೊಳೆ ಯೋಜನೆಗೆ 13 ಸಾವಿರ ಕೋಟಿ ರೂಗಳನ್ನು ಕೊಟ್ಟಿದ್ದಾರೆ ಎಂದು ಶಾಸಕ ಡಾ ಕೆ.ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.ನಗರದ ಕೆಳಗಿನ ತೋಟದಲ್ಲಿ ಆಯೋಜಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ವ್ಯಕ್ತಿಗಳಿದ್ದರೂ ಸಹ ಯಾವುದೇ ಕಾರಣಕ್ಕೂ ಚಟುವಟಿಕೆಗಳಲ್ಲಿ ರಾಜಕೀಯವನ್ನು ಬೆರೆಸಬಾರದು. ಸಹಕಾರಿ ಮನೋಭಾವನೆಯೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಿಳಿಸಿದರು.
ಪ್ರಸ್ತುತ ಲೀಟರ್ ಹಾಲಿಗೆ ಪ್ರೊತ್ಸಾಹ ಧನ 4 ರೂ.ಗಳನ್ನು ನೀಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ತುಂಬಾ ಅನುಕೂಲವಾಗಿದೆ. ಅಲ್ಲದೇ ಕ್ಷೀರಭಾಗ್ಯ ಯೋಜನೆಯ ಮೂಲಕ ಮಕ್ಕಳಿಗೆ ಹಾಲನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನೆಯೂ ಹೆಚ್ಚಾಗಿದೆ. ಇದರಿಂದ ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆಯಲ್ಲಿ ರೈತರು ತೊಡಗಿಸಿಕೊಂಡು ಆರ್ಥಿಕ ಲಾಭ ಗಳಿಸಲು ಸಾಧ್ಯವಾಗಿದೆ ಎಂದರು. ಚಿಕ್ಕಬಳ್ಳಾಪುರದ ನೀರಾವರಿ ಒದಗಿಸಲು 900 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದ ಅವರು, ಸಹಕಾರಿ ಸಂಘಗಳು ಚಟುವಟಿಕೆಗಳನ್ನು ಕೈಗೊಂಡು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು.

 

ಹಾಲಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರಬೇಕು. ಅದರಲ್ಲೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಿ ಲಾಭವನ್ನು ಗಳಿಸಬೇಕೆಂದು ಸಲಹೆ ನೀಡಿದರು.ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಲ್ಲಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ್, ಮುಖಂಡರಾದ ಸಿದ್ದರಾಮಪ್ಪ, ಹಾಲಪ್ಪ, ಹಾಲು ಉತ್ಪಾದಕರ ಸಂಘದ ಯೋಜನಾಧಿಕಾರಿ ಗೋಪಾಲ ಮತ್ತಿತರರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin