ಎತ್ತಿನಹೊಳೆ ಯೋಜನೆ : ಮರ ಕಡಿಯದಂತೆ ಸೂಚನೆ, ಡಿ.2ಕ್ಕೆ ವಿಚಾರಣೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

NGT-05

ನವದೆಹಲಿ,ನ.11-ಎತ್ತಿನಹೊಳೆ ಯೋಜನೆ ವಿಚಾರಕ್ಕೆ ಸಂಬಂಧಪಟ್ಟಂತೆ ಮುಂದಿನ ಆದೇಶ ನೀಡುವ ತನಕ ಯೋಜನಾ ವ್ಯಾಪ್ತಿಗೆ ಬರುವ ಯಾವುದೇ ಮರಗಳನ್ನು ಕಡಿದು ಹಾಕದಂತೆ ಹಸಿರು ನ್ಯಾಯಾಧೀಕರಣ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಅಲ್ಲದೆ ಈ ಪ್ರಕರಣದ ವಿಚಾರಣೆಯನ್ನು ಡಿ.2ಕ್ಕೆ ಮುಂದೂಡಿದೆ.  ಈ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಕೆ.ಎಂ.ಸೋಮಶೇಖರ್ ನ್ಯಾಯಾಧೀಕರಣಕ್ಕೆ ಮನವಿ ಸಲ್ಲಿಸಿದ್ದರು. ಈ ಅರ್ಜಿ ಕುರಿತ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನ್ಯಾಯಮಂಡಳಿ ಕೇಂದ್ರ ಪರಿಸರ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡರು.

ಈ ಯೋಜನೆ ನಾಲ್ಕು ನದಿಗಳಿಗೆ ಸಂಬಂಧಪಟ್ಟಿದ್ದಾಗಿದೆ. ಯೋಜನೆಯಿಂದ ಪರಿಸರದ ಮೇಲೆ ಅದರಲ್ಲೂ ಪಶ್ಚಿಮಘಟ್ಟಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಹೀಗಾಗಿ ಪರಿಸರ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಗ್ರೀನ್ ಟ್ರಿಬ್ಯುನಲ್ ಅಭಿಪ್ರಾಯಪಟ್ಟಿದೆ.  ಪರಿಸರ ಹಿತರಕ್ಷಣೆಯಿಂದ ಈ ಯೋಜನೆಯ ಕಾಮಗಾರಿಯನ್ನು ಮುಂದಿನ ಆದೇಶದ ತನಕ ಮುಂದುವರೆಸಬಾರದು ಹಾಗೂ ಯೋಜನಾ ವ್ಯಾಪ್ತಿಯಲ್ಲಿರುವ ಯಾವುದೇ ಮರಗಳನ್ನು ಅನುಮತಿ ಇಲ್ಲದೆ ಕಡಿದು ಹಾಕಬಾರದೆಂದು ಸ್ಪಷ್ಟ ಸೂಚನೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin