ಎನ್‍ಆರ್‍ಐ ಮೂಲಕ ನೋಟ್ ಬದಲಾವಣೆಗೆ ಪ್ಲಾನ್ ಮಾಡಿದ್ದ ನಾಗ

ಈ ಸುದ್ದಿಯನ್ನು ಶೇರ್ ಮಾಡಿ

Bomb-Naga-01

ಬೆಂಗಳೂರು, ಮೇ 14-ಚೆನ್ನೈ ಪರಿಚಿತ ಐವರು ಎನ್‍ಆರ್‍ಐಗಳ ಮೂಲಕ ಹಳೇ ನೋಟು ಬದಲಾವಣೆ ಮಾಡಲು ಪ್ಲಾನ್ ಮಾಡಿದ್ದಾಗಿ ಪಾಲಿಕೆ ಮಾಜಿ ಸದಸ್ಯ ವಿ.ನಾಗರಾಜ್ ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಪೊಲೀಸರ ವಿಚಾರಣೆಗೆ ಮೊದ ಮೊದಲು ಸ್ಪಂದಿಸದ ನಾಗ ಆನಂತರ ಸ್ಪಂದಿಸುತ್ತಾ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಎಂದು ತಿಳಿದುಬಂದಿದೆ.   2018ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಹಣ ಸಂಗ್ರಹಿಸುತ್ತಿದ್ದಾಗಿ ನಾಗ ಹೇಳಿದ್ದಾನೆ ಎನ್ನಲಾಗಿದೆ.ಜಾಮೀನು ಸಿಗುತ್ತದೆ ಎಂದು ಡಾನ್ ಗುಂಗಿನಲ್ಲಿದ್ದೆ ಎಂದು ನಾಗ ವಿಚಾರಣೆ ವೇಳೆ ಹೇಳಿರುವುದಾಗಿ ತಿಳಿದುಬಂದಿದೆ.   ಉದ್ಯಮಿ ಉಮೇಶ್ ಅವರಿಂದ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇಳಿದ ಪ್ರಶ್ನೆಗಳಿಗೂ ಉತ್ತರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ನಾಗ ಹಾಗೂ ಆತನ ಇಬ್ಬರು ಮಕ್ಕಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಮೂವರನ್ನು ಪ್ರತ್ಯೇಕವಾಗಿ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin